ಬೆಂಗಳೂರು : ಕೊರೋನಾ ಸೋಂಕಿನ ನಾಲ್ಕನೇ ಅಲೆಯ ಭೀತಿಯಲ್ಲಿ ಭಾರತವಿದ್ದು, ಕರ್ನಾಟಕದಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಲಾರಂಭಿಸಿದೆ.
ಈ ನಡುವೆ ಬೆಂಗಳೂರಿನ ಮಹದೇವಪುರದಲ್ಲಿ ಹೆಚ್ಚು ಕೋರೊನಾ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ಶನಿವಾರ ಒಂದೇ ದಿನ 13 ಹೊಸ ಕಂಟೈನ್ಮೆಂಟ್ ವಲಯ ಸೃಷ್ಟಿಯಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಒಟ್ಟು ಕಂಟೈನ್ಮೆಂಟ್ ಏರಿಯಾಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.ಈ ಪೈಕಿ ಮಹದೇವಪುರದಲ್ಲೇ 31 ಕಂಟೈನ್ಮೆಂಟ್ ವಲಯಗಳಿದೆ.
ಇನ್ನು ಬೆಂಗಳೂರಿನಲ್ಲಿ ಶನಿವಾರ 236 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ 3.88ರಷ್ಟಿದೆ. 598 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಪ್ರಸ್ತುತ ರಾಜಧಾನಿಯಲ್ಲಿ 4567 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 69 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 11 ಮಂದಿ ಐಸಿಯುನಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
Discussion about this post