ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ವಿಧಾನಸೌಧದಲ್ಲಿ 108 ಆರೋಗ್ಯ ಕವಚ ತುರ್ತು ವೈದ್ಯಕೀಯ ಸೇವೆಗೆ ನೂತನವಾಗಿ 120 ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಸಚಿವರಾದ ಡಾ. ಕೆ.ಸುಧಾಕರ್, ಎಸ್.ಟಿ.ಸೋಮಶೇಖರ್, ಬಿ.ಎ.ಬಸವರಾಜ, ಬಿ.ಶ್ರೀರಾಮುಲು, ಮುನಿರತ್ನ, ಬಿ.ಡಿ.ಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಸಂಸದ ಪಿ.ಸಿ.ಮೋಹನ್ ಮತ್ತಿತರರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಕಳೆದ 70 ವರ್ಷಗಳಿಂದ ಆರೋಗ್ಯ ಮೂಲಭೂತ ಸೌಕರ್ಯಗಳನ್ನು ನೀಡಲು ನಾವು ಕಾಳಜಿ ಮಾಡಿಲ್ಲ. ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಹಾಸಿಗೆಗಳಿಲ್ಲ. ಹೈದರಾಬಾದ್ ಕರ್ನಾಟಕ ಭಾಗದಲ್ಲಿ 10,000 ರೋಗಿಗಳಿಗೆ ಒಂದು ಬೆಡ್ ವ್ಯವಸ್ಥೆ ಇದೆ. ಹೀಗಾಗಿ ರೋಗಿಗಳು ಮತ್ತು ವೈದ್ಯರ ಅನುಪಾತ ಹೆಚ್ಚಾಗಬೇಕು.
ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಆರೋಗ್ಯ ಮೂಲಸೌಕರ್ಯಗಳು ಹೆಚ್ಚಲಿವೆ. ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮ ಕೈಗೊಳ್ಳಲು ಅಧಿಕಾಗಳಿಗೆ ಸೂಚಿಸಲಾಗಿದೆ ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚಿನ ಕಾಳಜಿ ವಹಿಸುವಂತೆ ಆದೇಶಸಲಾಗಿದೆ ಅಂದರು.
ಇದೇ ವೇಳೆ ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ಆರೋಗ್ಯ ಸೇವೆಗಳು ಸಂಪೂರ್ಣವಾಗಿ ಒಂದು ಪ್ರಾಧಿಕಾರದಡಿಗೆ ಬರಬೇಕು. ಬರುವ ದಿನಗಳಲ್ಲಿ ಇದನ್ನು ಕಾರ್ಯಗತಗೊಳಿಸುವುದಾಗಿ ಹೇಳಿದರು. ಈ ಮೂಲಕ ಮುಂದಿನ ದಿನಗಳಲ್ಲಿ ಬಿಬಿಎಂಪಿಗೆ ಆರೋಗ್ಯ ಕಾಳಜಿಯ ಹೊರೆಯನ್ನು ತಗ್ಗಿಸುವ ಸೂಚನೆ ಕೊಟ್ಟಿದ್ದಾರೆ.
Discussion about this post