ಬೆಂಗಳೂರು : 25 ಕೋಟಿ ವಂಚನೆ ಪ್ರಕರಣದಿಂದ ಪ್ರಾರಂಭವಾದ ವಿವಾದದ ಮೂಲಕ ಸಿನಿಮಾದ ಹೊರತಾಗಿ ಸುದ್ದಿಗೆ ಬಂದ ನಟ ದರ್ಶನ್ ಅದ್ಯಾಕೋ ಮತ್ತೆ ಮತ್ತೆ ಎಡವಟ್ಟು ಮಾಡಿಕೊಳ್ಳುತ್ತಿದ್ದಾರೆ ಅನ್ನುವುದು ಸ್ಪಷ್ಟ. ವಿವಾದ ಪ್ರಾರಂಭವಾದ ಸಂದರ್ಭದಲ್ಲಿ ನಿರ್ಮಾಪಕ ಉಮಾಪತಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ದರ್ಶನ್, ಇಡೀ ಪ್ರಕರಣದಲ್ಲಿ ಉಮಾಪತಿಯೇ ತಪ್ಪಿತಸ್ಥನೇ ಅನ್ನುವ ಪ್ರಶ್ನಾರ್ಥಕ ಚಿಹ್ನೆ ಮೂಡಿಸಿದ್ದರು.
ಯಾವಾಗ ಉಮಾಪತಿ ದರ್ಶನ್ ಗೆಳೆಯರ ಮೇಲೆ ಮುಗಿ ಬಿದ್ದರೋ ಚಿತ್ರಣವೇ ಬದಲಾಗಿ ಹೋಯ್ತು. ದರ್ಶನ್ ಗೆಳೆಯರ ಬಗ್ಗೆ ಉಮಾಪತಿ ಎತ್ತಿದ ಅದ್ಯಾವುದೇ ಪ್ರಶ್ನೆಗಳಿಗೆ ನಟ ದರ್ಶನ್ ಆಗ್ಲಿ, ದರ್ಶನ್ ಗೆಳೆಯರಾಗಲಿ ಉತ್ತರಿಸಲಿಲ್ಲ. ವಿವಾದವನ್ನು ಅಲ್ಲಿಗೆ ತಣ್ಣಗಾಗಿಸುವ ಪ್ರಯತ್ನ ನಡೆಯಿತು. ಇದಾದ ಬಳಿಕ ಮೈಸೂರು ಹಲ್ಲೆ ಪ್ರಕರಣವನ್ನು ಇಂದ್ರಜಿತ್ ಲಂಕೇಶ್ ಬೆಳಕಿಗೆ ತಂದರು. ಈ ವೇಳೆ ಹಲ್ಲೆಯೇ ಆಗಿಲ್ಲ ಅನ್ನುವಂತೆ ಬಿಂಬಿಸುವ ಪ್ರಯತ್ನ ನಡೆಯಿತು. ಯಾವಾಗ ಆಡಿಯೋ, ವಿಡಿಯೋ ಸಾಕ್ಷಿಗಳು ಟಿವಿಗಳಲ್ಲಿ ಪ್ರಸಾರವಾಯ್ತೋ ಹಲ್ಲೆಯೇ ನಡೆದಿಲ್ಲ ಅಂದವರು ದಿವ್ಯ ಮೌನಕ್ಕೆ ಶರಣಾಗಿದ್ದರು.
ಇದರ ಬೆನ್ನಲ್ಲೇ ರಿಯಲ್ ಎಸ್ಟೇಟ್ ವ್ಯವಹಾರವೂ ವಿವಾದಕ್ಕೆ ಮತ್ತಿಕೊಂಡಿದೆ. ಅಷ್ಟಕ್ಕೆ ಮುಗಿದಿಲ್ಲ, ಈ ವಿವಾದಕ್ಕೆ ಸಂಬಂಧವಿಲ್ಲದ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹೆಸರುಗಳು ಸೇರಿಕೊಂಡಿತ್ತು. ಅಷ್ಟೇ ಅಲ್ಲದೆ ಈ ವಿವಾದದಲ್ಲಿ ಅಚ್ಚರಿ ಅನ್ನುವಂತೆ ನಟ, ನಿರ್ದೇಶಕ ಪ್ರೇಮ್ ಹೆಸರು ಕೂಡಾ ಬಂತು.
ಇದೀಗ ವಿವಾದದಲ್ಲಿ ತನ್ನ ಹೆಸರನ್ನು ದರ್ಶನ್ ಎಳೆದುಕೊಂಡು ಬಂದಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಪ್ರೇಮ್, ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅವರಿಗೆ ಗುಮ್ಮಿದ್ದಾರೆ.

ದರ್ಶನ್ ಅವ್ರೆ, ನಾನು ಕರಿಯ ಸಿನಿಮಾ ಮಾಡ್ಬೇಕಾದ್ರೆ ಯಾವ್ ಪುಡಂಗುನೂ ಅಲ್ಲಾ ನಂಗ್ ಕೊಂಬು ಇರ್ಲಿಲ್ಲ.. ನಾನೊಬ್ಬ ಸಾಮಾನ್ಯ ನಿರ್ದೇಶಕ. ರಾಜಕುಮಾರ್ ರವರು, ಅಂಬರೀಷ್ ರವರು, ವಿಷ್ಣುವರ್ಧನ್ ರವರು ಹಾಗೂ ರಜನಿಕಾಂತ್ ರವರು ಒಬ್ಬ ಒಳ್ಳೆ ನಿರ್ದೇಶಕ ಅಂದು ಬೆನ್ನು ತಟ್ಟಿದ್ರು. ಇಡೀ ಕರ್ನಾಟಕ ಜನತೆ ಹರಸಿ ಹಾರೈಸಿ ಹ್ಯಾಟ್ರಿಕ್ ನಿರ್ದೇಶಕ ಅಂತ ಬಿರುದು ಕೊಟ್ಟಾಗ್ಲು ನನಗ್ ಕೊಂಬು ಬರ್ಲಿಲ್ಲ.. ನಾನು ನಂದೇ ಆದ್ ಸ್ಟೈಲ್ ನಲ್ಲಿ ಸಿನಿಮಾ ಮಾಡ್ಕೊಂಡು ಬಂದೋವ್ನು.. ಸುಮಾರು ನಿರ್ಮಾಪಕರುಗಳು ಹಾಗೂ ನಿಮ್ಮ ಅಭಿಮಾನಿಗಳು ಹಾಗೂ ನನ್ನ ಅಭಿಮಾನಿಗಳು ಪ್ರತಿ ಸಾರಿ ದರ್ಶನ್ ಹಾಗೂ ನಿಮ್ಮ ಕಾಂಬಿನೇಶನ್ ನಲ್ಲಿ ಯಾವಾಗ ಚಿತ್ರ ಮಾಡ್ತಿರಂತ ಕೇಳ್ತಾನೆಯಿದ್ರು. ಇದ್ರ ಬಗ್ಗೆ ನಿಮಗೂ ಗೊತ್ತು ನನಗು ಗೊತ್ತು. ಇಬ್ಬರು ಸೇರಿ ಸಿನಿಮಾ ಮಾಡೋದ್ರ ಬಗ್ಗೆ ಚೆರ್ಚೆ ಮಾಡಿದ್ವಿ. ನಾನು ನಮ್ ಬ್ಯಾನರ್ ನಲ್ ಸಿನಿಮಾ ಮಾಡಿ ಇಲ್ಲಾ ನಿಮ್ ಬ್ಯಾನರ್ ನಲ್ ಸಿನಿಮಾ ಮಾಡೋಣ ಅಂತ ಮತ್ತೆ ಚರ್ಚೆ ಮಾಡಿದ್ವಿ. ಆದರೆ ನನಗೆ ಉಮಾಪತಿಯವರು, ನೀವು ಹಾಗೂ ದರ್ಶನ್ ಸೇರಿ ನಂಗ್ ಸಿನಿಮಾ ಮಾಡ್ಕೊಡಿ ಅಂತ ಅಂದ್ರು. ಅದಿಕ್ಕೆ ನಾನು ಉಮಾಪತಿ ಅವ್ರನ್ನ ನಿಮಗೆ ಪರಿಚಯ ಮಾಡಿ.. ಮೂರು ಜನ ಸೇರಿ ಸಿನಿಮಾ ಮಾಡೋಣ ಅಂತ ಡಿಸೈಡ್ ಮಾಡಿದ್ವಿ.. ಆದ್ರೆ ನನ್ ದಿ ವಿಲ್ಲನ್ ಸಿನಿಮಾ ಲೇಟ್ ಆದ ಕಾರಣ ನಾನೇ ಉಮಾಪತಿಯವರಿಗೆ ದರ್ಶನ್ ಅವ್ರ ಡೇಟ್ ಇದ್ದ ಕಾರಣ ಬೇರೆ ನಿರ್ದೇಶಕರನ್ನ ಹಿಡಿದು ಸಿನಿಮಾ ಮಾಡಿ ಅಂತ ಹೇಳಿದ್ದೆ.. ನನ್ನ ಸಂಭಾವನೆಯನ್ನ ಉಮಾಪತಿಯವರಿಗೆ ವಾಪಾಸ್ ನೀಡಿ ರಾಬರ್ಟ್ ಸಿನಿಮಾ ಗೆ ಹಾರೈಸಿದವನು ನಾನು.. ಅದೇ ರೀತಿ ರಾಬರ್ಟ್ ಚಿತ್ರ ಹಿಟ್ ಆಯ್ತು, ಎಲ್ಲರ ಹಾಗೇ ನಾನು ಖುಷಿ ಪಟ್ಟೆ.. ಇದ್ರ ಮದ್ಯೆ ನನ್ ಹೆಸ್ರು ಯಾಕೆ.. ದರ್ಶನ್ ಅವ್ರೆ ನಿರ್ದೇಶಕ್ರು ಯಾವ್ ಪುಡಂಗಿಗಳು ಅಲ್ಲಾ, ಅವ್ರಿಗೆ ಕೊಂಬು ಇರಲ್ಲ.. ತೆರೆಮೇಲೆ ಒಬ್ಬ ನಟನನ್ನ ಹುಟ್ಟಾಕಿ ಅವ್ನಿಗ್ ಕೊಂಬು ಬರ್ಬೇಕಾದ್ರೆ ನಿರ್ದೇಶಕನ ಶ್ರಮ ಎಷ್ಟಿರುತ್ತೆಂತ ಪ್ರತಿಯೊಬ್ಬ ಕಲಾವಿದರಿಗೂ ಗೊತ್ತು ಅದು ನಿಮ್ಗೂ ಗೊತ್ತು.. ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ… Thank you for your kind words ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ.
Discussion about this post