ಬೆಂಗಳೂರು : ರಾಜಧಾನಿಯ ಶಾಪಿಂಗ್ ಮಾಲ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ವಾರಾಂತ್ಯ ಕರ್ಫ್ಯೂ ಹಿನ್ನೆಲೆ ಶಾಪಿಂಗ್ ಮಾಲ್ನಲ್ಲಿ ಯಾವುದೇ ಜನರು, ಸಿಬ್ಬಂದಿ ಇರಲಿಲ್ಲ. ಹೀಗಾಗಿ ದೊಡ್ಡ ಅನಾಹುತ ತಪ್ಪಿದೆ.
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಕೆರೆ ಗೇಟ್ ಬಳಿಯಿರುವ ಶಾಪಿಂಗ್ ಮಾಲ್ನಲ್ಲಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಈ ವೇಳೆ ಬೆಂಕಿ ಕೆನ್ನಾಲೆ ಅಬ್ಬರ ಹೆಚ್ಚಾದ ಕಾರಣ ಸ್ಥಳಕ್ಕೆ, 6 ಆಗ್ನಿಶಾಮಕ ವಾಹನ ತರಿಸಿಕೊಳ್ಳಲಾಗಿದೆ.
ಸತತ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ.
ರಾತ್ರಿ ಊಟ ಸೇವಿಸಿದ ವಸತಿ ಶಾಲೆ ಮಕ್ಕಳು ಅಸ್ಪಸ್ಥ : ಆಸ್ಪತ್ರೆ ಸೇರಿದ 50 ವಿದ್ಯಾರ್ಥಿಗಳು
ದಾವಣಗೆರೆ : ರಾತ್ರಿ ಊಟ ಸೇವಿಸಿದ ಬಳಿಕ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಜಿಲ್ಲೆಯ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಸಂಭವಿಸಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಊಟ ಸೇವಿಸಿದ ಬಳಿಕ ವಾಂತಿ ಮಾಡಲಾರಂಭಿಸಿದ್ದಾರೆ. ಹೀಗಾಗಿ ತಕ್ಷಣ 50ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊನ್ನಾಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ನಡುವೆ ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಬೆಂಗಳೂರಿನಿಂದ ಹೊನ್ನಾಳಿಗೆ ದೌಡಾಯಿಸಿದ ಶಾಸಕ ರೇಣುಕಾಚಾರ್ಯ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.
ಫುಡ್ ಪಾಯ್ಸನ್ ನಿಂದ ಈ ರೀತಿಯಾಗಿದೆ ಅನ್ನಲಾಗಿದ್ದು, ಖಚಿತ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
Discussion about this post