ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಈ ಬಾರಿ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬೇಕು. SSLC supplementary resultಗೆ ಕಾಯುತ್ತಿರುವ ವಿದ್ಯಾರ್ಥಿಗಳು ಇದನ್ನು ಗಮನಿಸಿ
ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಪ್ರಸಕ್ತ ಸಾಲಿನ SSLC ಪೂರಕ ಪರೀಕ್ಷೆಯ ಫಲಿತಾಂಶ ( SSLC supplementary result ) ಪ್ರಕಟಗೊಂಡಿದ್ದು ಬುಧವಾರ ಶೇ.39.59ರಷ್ಟು ಫಲಿತಾಂಶ ದಾಖಲಾಗಿದೆ. ಪರೀಕ್ಷೆ ಬರೆದಿದ್ದ 94 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ 37,479 ಮಂದಿ ಉತ್ತೀರ್ಣರಾಗಿದ್ದಾರೆ. ಎಂದಿನಂತೆ ವಿದ್ಯಾರ್ಥಿನಿಯರೇ ಈ ಬಾರಿ ಮೇಲುಗೈ ಸಾಧಿಸಿದ್ದು, ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಶೇ.37.99 ಸರ್ಕಾರಿ, ಶೇ.41.46 ಅನುದಾನಿತ ಮತ್ತು ಶೇ.40.68 ಖಾಸಗಿ ಶಾಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕಳೆದ ಜೂ.27ರಿಂದ ಜು.4ರ ವರೆಗೆ ರಾಜ್ಯದ 423 ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆದಿದ್ದು, ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿ ಹೋಲಿಸಿದರೆ ಈ ಬಾರಿಯ ಫಲಿತಾಂಶ ( SSLC supplementary result)ಸಮಾಧಾನ ತಂದಿಲ್ಲ. ಅತ್ಯಂತ ಕಡಿಮೆ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಇದನ್ನೂ ಓದಿ : leopard in bengaluru : ಕೆಂಪೇಗೌಡ ಬಡಾವಣೆಯಲ್ಲಿ ಚಿರತೆ ಹೆಜ್ಜೆ ಗುರುತು
ವಿದ್ಯಾರ್ಥಿಗಳು ಫಲಿತಾಂಶವನ್ನು ಗುರುವಾರ (ಜು.21) ಮಧ್ಯಾಹ್ನ 12 ಗಂಟೆಯ ಬಳಿಕ https://karresults.nic.in ಹಾಗೂ https://kseeb.karnataka.gov.in/sslcsupexamresults2022 ರಲ್ಲಿ ವೀಕ್ಷಿಸಬಹುದು. ರಾಜ್ಯದ ಎಲ್ಲಾ ಶಾಲೆಗಳ ಸೂಚನಾ ಫಲಕದಲ್ಲೂ ಗುರುವಾರ ಫಲಿತಾಂಶ ಪ್ರಕಟಗೊಂಡಿದೆ. ಉತ್ತೀರ್ಣರಾಗಿರುವ ವಿದ್ಯಾರ್ಥಿಗಳ ಫಲಿತಾಂಶ ಪಟ್ಟಿ ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ಗುರುವಾರ ಮಧ್ಯಾಹ್ನ 1 ಗಂಟೆಯ ನಂತರ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಇನ್ನು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಜು.22ರಿಂದ 26ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಪರೀಕ್ಷಾ ಮಂಡಳಿ ತಿಳಿಸಿದ್ದು, ಆನ್‌ಲೈನ್‌ನಲ್ಲಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಅರ್ಜಿ ಸಲ್ಲಿಸಿದ ನಂತರ ಆಫ್‌ಲೈನ್‌ನಲ್ಲಿ ಚಲನ್ ಡೌನ್‌ಲೋಡ್ ಮಾಡಿಕೊಂಡು ಬ್ಯಾಂಕ್‌ನಲ್ಲಿ ಶುಲ್ಕ ಪಾವತಿಸಲು ಜು.27 ಕೊನೆಯ ದಿನವಾಗಿದೆ. ಉತ್ತರ ಪತ್ರಿಕೆಗಳ ಮರು ಎಣಿಕೆ ಹಾಗೂ ಮರು ಮೌಲ್ಯಮಾಪನಕ್ಕೆ ಜು.25ರಿಂದ ಜು.31ರೊಳಗೆ ಅರ್ಜಿ ಸಲ್ಲಿಸಬಹುದು. ಮರು ಎಣಿಕೆಗಾಗಿ ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದ್ದು ಆಫ್ ಲೈನ್ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದೆ.
ಯಾವುದೇ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗದಿದ್ದಲ್ಲಿ ಅಥವಾ ಫಲಿತಾಂಶ ತಡೆಹಿಡಿದಿದ್ದಲ್ಲಿ ಫಲಿತಾಂಶ ಪ್ರಕಟವಾದ 10 ದಿನದೊಳಗೆ ಮಂಡಳಿ ಸಹಾಯವಾಣಿಗೆ 080- 23310075/76, 080 23349434/23445579 ಸಂಪರ್ಕಿಸಬಹುದು ಎಂದು ಇದೇ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Mangalore kissing : ಮಂಗಳೂರು ಕಾಲೇಜಿನಲ್ಲಿ ಕಿಸ್ಸಿಂಗ್ ಸ್ಪರ್ಧೆ
ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ ಆಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ಪ್ರಾರಂಭಿಸಿದ್ದಾರೆ.
ಮಂಗಳೂರು : ಹೆತ್ತವರು ಕಷ್ಟ ಪಟ್ಟು ದುಡಿದು ಮಕ್ಕಳ ಎಜುಕೇಶನ್ ಗಾಗಿ ದುಡ್ಡು ಸುರಿಯುತ್ತಾರೆ. ಮಕ್ಕಳು ಓದಿ ಒಂದು ಕೆಲಸ ಗಿಟ್ಟಿಸಿ ಬದುಕು ಕಟ್ಟಿಕೊಳ್ಳಲಿ ಎಂದು ಒದ್ದಾಡುತ್ತಾರೆ. ಆದರೆ ಕೆಲ ವಿದ್ಯಾರ್ಥಿಗಳು ಮೋಜು ಮಸ್ತಿ ಎಂದು ಕಾಲ ಕಳೆಯುತ್ತಾರೆ.ಇದೀಗ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿಗಳು ಕಿಸ್ಸಿಂಗ್ ಸ್ಪರ್ಧೆ ನಡೆಸಿ ವೈರಲ್ ಆಗಿದ್ದಾರೆ.
ಮನೆಯೊಂದರಲ್ಲಿ ನಡೆದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯ ಕಿಸ್ಸಿಂಗ್ ಸ್ಪರ್ಧೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಮವಸ್ತ್ರದಲ್ಲೇ ನಡೆದ ಈ ಕಿಸ್ಸಿಂಗ್ ಸ್ಪರ್ಧೆ ಕರಾವಳಿಯನ್ನು ತಲೆ ತಗ್ಗಿಸುವಂತೆ ಮಾಡಿದೆ.
ಈ ನಡುವೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಮಂಗಳೂರು ಪೊಲೀಸರು ಈ ಸಂಬಂಧ ತನಿಖೆ ನಡೆಸಲು ಮುಂದಾಗಿದ್ದಾರೆ. ಜೊತೆಗೆ ಕಿಸ್ಸಿಂಗ್ ಸ್ಪರ್ಧೆಗಾಗಿ ವಿದ್ಯಾರ್ಥಿಗಳು ಮಾದಕ ವಸ್ತು ಸೇವಿಸಿದ್ದರೆ ಅನ್ನುವ ಬಗ್ಗೆಯೂ ತನಿಖೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಇನ್ನು ಈ ವಿಡಿಯೋದಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಪರಸ್ಪರ ಚುಂಬಿಸುತ್ತಿದ್ರೆ ಸುತ್ತ ಕುಳಿತ ಇತರ ವಿದ್ಯಾರ್ಥಿನಿಯರು ಹುರಿದುಂಬಿಸುವುದು ವಿಡಿಯೋದಲ್ಲಿ ಸೆರೆಯಾಗಿದೆ. ಹೀಗಾಗಿ ಪ್ರಕರಣವನ್ನು ಇದೀಗ ಗಂಭೀರವಾಗಿ ಪರಿಗಣಿಸಲಾಗಿದೆ.
Discussion about this post