ಬೆಂಗಳೂರು : ಬೈಕ್ ನಲ್ಲಿ ವ್ಹೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ಬೆಂಗಳೂರು ಸಂಚಾರ ವಿಭಾಗದ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಮುಂದಾಗಿದ್ದಾರೆ. ಒಂದು ವೇಳೆ ಅಪ್ರಾಪ್ತರು ವ್ಹೀಲಿಂಗ್ ಮಾಡಿ ಸಿಕ್ಕಿ ಬಿದ್ರೆ ತಂದೆ ತಾಯಿ ವಿರುದ್ಧ ಕೇಸ್ ಹಾಕುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.
ಪುಲಕೇಶಿ ನಗರ, ಬಾಣಸವಾಡಿ, ಕೆ ಆರ್ ಪುರ, ಬ್ಯಾಟರಾಯನಪುರದಲ್ಲಿ ಮೊದಲ ಕಾರ್ಯಾಚರಣೆ ನಡೆಯುತ್ತಿದ್ದು, ಈಗಾಗಲೇ 8 ಮಂದಿಯನ್ನು ಬಂಧಿಸಿ, 8 ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಗಳ ವಿರುದ್ಧ ಸೆಕ್ಷನ್ 107ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಡ್ರೈವಿಂಗ್ ಲೈಸೆನ್ಸ್ ಅನ್ನು ವಶಕ್ಕೆ ಪಡೆಯಲಾಗಿದೆ.
ಈ ಕಾರ್ಯಾಚರಣೆ ಬಗ್ಗೆ ಮಾತನಾಡಿರುವ ಸಂಚಾರ ವಿಭಾಗದ ಜಂಟಿ ಆಯುಕ್ತ ರವಿಕಾಂತೇಗೌಡ, ಅಪ್ರಾಪ್ತ ಮಕ್ಕಳಿಗೆ ಬೈಕ್ ಚಲಾಯಿಸಲು ನೀಡಿದ ಆರೋಪದಲ್ಲಿ ಅವರ ತಂದೆ ತಾಯಿ ಮೇಲೂ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ ಅಂದಿದ್ದಾರೆ.
Discussion about this post