ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಸೂಚನೆ
ರಾಜ್ಯದಲ್ಲಿ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಆಯೋಜಕರಿಗೆ ಬೆಸ್ಕಾಂ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಬೆಂಗಳೂರಿನಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಸಂಬಂಧಪಟ್ಟ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಆಯೋಜಕರಿಗೆ ಸೂಚನೆ ನೀಡಿದೆ.
ಹಬ್ಬ ಆಚರಿಸುವಾಗ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು. ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂದರ್ಭದಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ಯಾವುದೇ ವಿದ್ಯುತ್ ಅವಘಡ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ್ ಬೀಳಗಿ ತಿಳಿಸಿದ್ದಾರೆ.
ಜೊತೆಗೆ ವಿದ್ಯುತ್ ತಂತಿಗಳು, ಕಂಬಗಳು ಅಥವಾ ಟ್ರಾನ್ಸ್ಫಾರ್ಮರ್ ಸ್ಟೇಷನ್ಗಳಿಗೆ ಕ್ಯಾನೋಪಿಗಳು ಅಥವಾ ಯಾವುದೇ ಇತರ ವಸ್ತುಗಳನ್ನು, ಶಾಮೀಯಾನ ದೃಷ್ಟಿಯಿಂದ ಕಟ್ಟಬಾರದು. ಮೆರವಣಿಗೆಯ ಸಮಯದಲ್ಲಿ ಎಚ್ಚರಿಕೆ ವಹಿಸಬೇಕು. ರಸ್ತೆಬದಿಯಲ್ಲಿ ವಿದ್ಯುತ್ ತಂತಿಗಳನ್ನು ತಪ್ಪಿಸಿ. ಸುರಕ್ಷಿತ ಮೆರವಣಿಗೆ ಮಾರ್ಗವನ್ನು ಖಚಿತಪಡಿಸಿಕೊಳ್ಳಲು ಉಪ ವಿಭಾಗಾಧಿಕಾರಿಗಳಿಗೆ ಮುಂಚಿತವಾಗಿ ತಿಳಿಸಬೇಕು ಎಂದು ಹೇಳಲಾಗಿದೆ.