ಕ್ಲೀನ್ ಹ್ಯಾಂಡ್ ಸಿದ್ದರಾಮಯ್ಯ ಅವರಿಗೆ ಕಳಂಕ ಅಂಟಿಕೊಳ್ಳುತ್ತದೆಯೇ
ಮೈಸೂರಿನ ಮುಡಾ ಬಿಡಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ದಾವೆ ಹೂಡಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ.
ಇದರಿಂದ ವಿಚಾರಣೆಗೆ ತಡೆ ನೀಡುವಂತೆ ಕೋರಿ ಮುಖ್ಯಮಂತ್ರಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ರಾಜ್ಯಪಾಲರು ವಿಚಾರಣೆಗೆ ನೀಡಿದ ಅನುಮತಿ ಕ್ರಮಬದ್ಧವಾಗಿದೆ ಎಂದು ನ್ಯಾಯಪೀಠ ಹೇಳಿದೆ.
ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಿದ್ದು, ರಾಜ್ಯಪಾಲರು ಯಾವುದೇ ಲೋಪ ಎಸಗಿಲ್ಲ. ಅರ್ಜಿದಾರರು ದಾವೆ ಹೂಡುವಂತೆ ನೀಡಿದ ಅನುಮತಿ ಸರಿಯಾಗಿದೆ ಎಂದು ತೀರ್ಪು ಪ್ರಕಟಿಸಿದೆ.
ಅರ್ಜಿದಾರರ ಪರವಾಗಿ ಸರ್ವೋಚ್ಛ ನ್ಯಾಯಾಲಯದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ರವಿವರ್ಮಕುಮಾರ್ ವಾದ ಮಂಡಿಸಿದ್ದರು. ರಾಜ್ಯಪಾಲರ ಪರ ಸಾಲಿಸೀಟರ್ ಜನರಲ್ ತುಷಾರ್ ಮೆಹ್ತಾ ವಕಾಲತ್ತು ವಹಿಸಿದ್ದರು.
ಈ ನಡುವೆ ಹೈಕೋರ್ಟ್ ತೀರ್ಪಿನ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ.
ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ.
ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ. ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ಎಸ್ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ ನಿರಾಕರಿಸಿದ್ದರು.
ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.
ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ.
ಈ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಮುಖಭಂಗ ಅನುಭವಿಸುವುದು ಖಂಡಿತ. ಸತ್ಯಮೇವ ಜಯತೇ ಎಂದು ತಿಳಿಸಿದ್ದಾರೆ.
The Karnataka High Court said Governor Thawar Chand Gehlot “did apply his mind in abundance” and could, therefore, take an “independent decision” on calling for Chief Minister Siddaramaiah’s prosecution.