ಜನನ ಮರಣ ನಮೂನೆ ಭರ್ತಿ ಮಾಡುವಾಗ ಎಲ್ಲಾ ಕಾಲಂಗಳನ್ನು ಸರಿಯಾಗಿ ಭರ್ತಿ ಮಾಡಿ
ವಿಜಯಪುರ ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಜನನ ಮರಣ ಘಟನೆಗಳನ್ನು ಕಡ್ಡಾಯವಾಗಿ ಜನನ ಮರಣ ಅಧಿನಿಯಮದಡಿ ನೋಂದಣಿ ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚಿಸಿದ್ದಾರೆ.
ವಿಜಯಪುರದಲ್ಲಿ ಜಿಲ್ಲಾ ಮಟ್ಟದ ಜನನ ಮರಣ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನನ ಮರಣ ನೋಂದಣಾಧಿಕಾರಿ ಹಾಗೂ ಉಪನೋಂದಣಾಧಿಕಾರಿಗಳು ನಮೂನೆ ಒಂದು ಹಾಗೂ ನಮೂನೆ ೨ರ ಮೂಲ ನಮೂನೆಗಳನ್ನು ಬಳಸಬೇಕು.
ಹಾಗೆಯೇ ಜನನ ಮರಣ ನಮೂನೆ ಭರ್ತಿ ಮಾಡುವಾಗ ಎಲ್ಲಾ ಕಾಲಂಗಳನ್ನು ಸರಿಯಾಗಿ ಭರ್ತಿ ಮಾಡಿ ಪರಿಶೀಲಿಸಬೇಕು ಎಂದು ಹೇಳಿದರು.