
ಬೆಂಗಳೂರು : ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿರುವ ಬಿಟ್ ಕಾಯಿನ್ ಪ್ರಕರಣ ಸಂಬಂಧ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಫೈವ್ ಸ್ಟಾರ್ ಹೋಟೆಲ್ ಒಂದರಲ್ಲಿ ತಂಗಿದ್ದ ಶ್ರೀಕಿಯನ್ನು ಜೀವನ್ ಭೀಮಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಡ್ರಗ್ಸ್ ಕೇಸ್ ನಲ್ಲಿ ಅರೆಸ್ಟ್ ಆಘಿದ್ದ ಶ್ರೀಕಿ ಸಿಸಿಬಿ ವಿಚಾರಣೆ ಸಂದರ್ಭದಲ್ಲಿ ಮಹತ್ವದ ಮಾಹಿತಿಗಳನ್ನು ಪೊಲೀಸರಿಗೆ ಬಿಟ್ಟು ಕೊಟ್ಟಿದ್ದ. ಜೊತೆಗೆ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡುವ ಮಾಹಿತಿಯೂ ಪೊಲೀಸರಿಗೆ ಸಿಕಿತ್ತು. ವಿದೇಶಿ APP, ಸರ್ಕಾರಿ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡುತ್ತಿದ್ದ ಈತ ಈ ಮೂಲಕ ಕಾಸು ಸಂಪಾದಿಸುತ್ತಿದ್ದ. ಮಾತ್ರವಲ್ಲದೆ ಪೋಕರ್ ಗೇಮ್, ಕ್ರಿಪ್ಟೋ ಕರೆನ್ಸಿ, ಬಿಟ್ ಕಾಯಿನ್, ವೈಎಫ್ಐ, ಇಥೆರಿಯಂ ಖಾತೆಗಳನ್ನು ಹ್ಯಾಕ್ ಮಾಡುವುದರಲ್ಲೂ ಈತ ನೈಪುಣ್ಯತೆ ಹೊಂದಿದ್ದ.
ಈ ವೇಳೆ 9 ಕೋಟಿ ರೂಪಾಯಿ ಮೌಲ್ಯದ ಬಿಟ್ ಕಾಯಿನ್ ಗಳನ್ನು ಜಪ್ತಿ ಮಾಡಲಾಗಿತ್ತು. ಇದಾದ ಬಳಿಕ ಜಾಮೀನು ಪಡೆದಿದ್ದ ಶ್ರೀಕಿ ನಾಪತ್ತೆಯಾಗಿದ್ದ.
ಆದರೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಕರ್ನಾಟಕದ ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಶ್ರೀಕಿಯನ್ನು ಪತ್ತೆ ವಶಕ್ಕೆ ಪಡೆಯಲಾಗಿದೆ. ಹಾಗಾದ್ರೆ ಹಿಂದೊಮ್ಮೆ ಬಂಧಿಸಿದಾಗ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳುವಲ್ಲಿ ಎಡವಿದರೇ ಅನ್ನುವ ಪ್ರಶ್ನೆ ಎದ್ದಿದೆ.

Discussion about this post