ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 53ನೇ ಮೇಯರ್ ಆಗಿ ಬಿಜೆಪಿಯ ಜೋಗುಪಾಳ್ಯ ವಾರ್ಡ್ ನ ಕಾರ್ಪೋರೇಟರ್ ಗೌತಮ್ ಕುಮಾರ್ ಆಯ್ಕೆಯಾಗಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯ ಕೇಂಪೇಗೌಡ ಪೌರ ಸಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. ಮೇಯರ್ ಹುದ್ದೆಗೆ ಬಿಜೆಪಿಯಿಂದ ಗೌತಮ್ ಕುಮಾರ್ ಮತ್ತು ಪದ್ಮನಾಭರೆಡ್ಡಿ ಇಬ್ಬರು ನಾಮಪತ್ರ ಸಲ್ಲಿಸಿದ್ದರು, ಅಂತಿಮವಾಗಿ ಪದ್ಮನಾಭ ರೆಡ್ಡಿ ನಾಮಪತ್ರ ವಾಪಸ್ ಪಡೆದಿದ್ದಾರೆ.
ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳಿಂದ ಮೇಯರ್ ಅಭ್ಯರ್ಥಿಯಾಗಿ ಕಾಂಗ್ರೆಸ್ ನ ಸತ್ಯನಾರಾಯಣ ಹಾಗೂ ಉಪಮೇಯರ್ ಅಭ್ಯರ್ಥಿಯಾಗಿ ಜೆಡಿಎಸ್ ನ ಗಂಗಮ್ಮ ಕಣದಲ್ಲಿದ್ದರು
ಮೇಯರ್ ಚುನಾವಣೆಯಲ್ಲಿ ಮತದಾನದ ಹಕ್ಕು ಹೊಂದಿರುವ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಸದಾನಂದಗೌಡ, ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್, ಬಚ್ಚೇಗೌಡ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಎಲ್. ಹನುಮಂತಯ್ಯ, ಸಚಿವ ಆರ್.ಅಶೋಕ್, ಶಾಸಕಿ ಸೌಮ್ಯರೆಡ್ಡಿ ಮತ್ತಿತರರು ಭಾಗವಹಿಸಿದ್ದರು.
ಕಾಂಗ್ರೆಸ್ ನ ಜೈರಾಮ್ ರಮೇಶ್ ಮತ್ತು ಡಿ.ಕೆ ಸುರೇಶ್ ಹಾಗೂ ಬಿಜೆಪಿಯ ನಿರ್ಮಲಾ ಸೀತಾರಾಮನ್ ಮತದಾನಕ್ಕೆ ಗೈರಾಗಿದ್ದರು.
ಬಿಬಿಎಂಪಿಯಲ್ಲಿ ಒಟ್ಟು 257 ಸದಸ್ಯ ಬಲವಿದ್ದು, ಬಿಜೆಪಿಗೆ 125, ಕಾಂಗ್ರೆಸ್ 104, ಜೆಡಿಎಸ್ 21 ಹಾಗೂ 7 ಪಕ್ಷೇತರ ಕಾರ್ಪೋರೇಟರ್ ಗಳಿದ್ದಾರೆ.
ಮೇಯರ್ ಪಟ್ಟಕ್ಕಾಗಿ ಮ್ಯಾಜಿಕ್ ನಂಬರ್ 129 ಆಗಿದೆ. ಬಿಜೆಪಿಯ 125 ಹಾಗೂ ಪಕ್ಷೇತರರು 5 ಮಂದಿ ಮತ ಚಲಾಯಿಸಿದ್ದಾರೆ. ಗೌತಮ್ ಅವರ ಪರವಾಗಿ 129 ಮತಗಳು ಚಲಾವಣೆಯಾಗಿದೆ.
Discussion about this post