ಗುಪ್ತಚರ ವರದಿ ಕುರಿತಾಗಿ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿ ನೀಡಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.
ಈ ಬಗ್ಗೆ ಕಿಡಿಕಾರಿರುವ ಬಿಜೆಪಿ ಮುಖಂಡ ಸುರೇಶ್ ಕುಮಾರ್ ಅವರು ಟ್ವಿಟರ್ ನಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದ ನಿಖಿಲ್, ತಮಗೆ ಸಿಕ್ಕ ಗುಪ್ತಚರ ವರದಿಯ ಅನ್ವಯ ಎಂಬ ಪದ ಬಳಕೆ ಮಾಡಿದ್ದು, ಇದೇ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದೆ.
ಗುಪ್ತಚರ ವರದಿ ಪಡೆಯಲು ನಿಖಿಲ್ ಕುಮಾರಸ್ವಾಮಿ, ಮುಖ್ಯಮಂತ್ರಿ, ಗೃಹಮಂತ್ರಿಯೋ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳ ಸ್ಪಷ್ಟನೆಗೂ ಅವರು ಆಗ್ರಹಿಸಿದ್ದಾರೆ.
Discussion about this post