ರಾಜ್ಯದಲ್ಲಿ ಮುಂಬರಲಿರುವ 15 ಕ್ಷೇತ್ರಗಳ ಉಪಚುನಾವಣೆ ಕಾಂಗ್ರೆಸ್ ಮತ್ತೊಂದು ಸುತ್ತಿನ ಸಿದ್ದತೆ ಪ್ರಾರಂಭಿಸಿದೆ. ಬಹುತೇಕ ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಟ್ಟಿರುವ ಹಿನ್ನಲೆಯಲ್ಲಿ ಉಪಚುನಾವಣೆ ನಡೆಯುತ್ತಿರುವುದರಿಂದ ಕಾಂಗ್ರೆಸ್ ಗೆ ಗೆಲ್ಲುವ ಅಭ್ಯರ್ಥಿಗಳ ಕೊರತೆ ಕಾಡುತ್ತಿದೆ.
ಈ ನಡುವೆ ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ನಾಯಕರು ಕಾಂಗ್ರೆಸ್ ಕಡೆ ಮುಖ ಮಾಡಿರುವುದರಿಂದ ಯಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು, ಯಾರನ್ನು ಸೇರಿಸಿಕೊಂಡರೆ ಲಾಭ, ಯಾರಿಗೆ ಟಿಕೆಟ್ ಕೊಟ್ಟರೆ ಗೆಲ್ಲಬಹುದು, ಒಂದು ವೇಳೆ ಬಿಜೆಪಿಯಿಂದ ವಲಸೆ ಬಂದವರನ್ನು ಸೇರಿಸಿಕೊಂಡರೆ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರು ಕೆಲಸ ಮಾಡುತ್ತಾರೆಯೇ ಅನ್ನುವ ಪ್ರಶ್ನೆಯೂ ಕಾಡುತ್ತಿದೆ.
ಹೀಗಾಗಿ “ನಾವು ಬಿಜೆಪಿಯಂತೆ ಬಂದವರನ್ನೆಲ್ಲ ಸೇರಿಸಿಕೊಳ್ಳುವುದಿಲ್ಲ. ಮೆರಿಟ್ ಆಧಾರದ ಮೇಲೆ ಸೇರಿಸಿಕೊಳ್ಳುತ್ತೇವೆ,” ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸ್ಪಷ್ಟ ಪಡಿಸಿದ್ದಾರೆ.
15 ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು 15 ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ,” ಎಂದು ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದರು.
Discussion about this post