ಕ್ಲೀನ್ ಹ್ಯಾಂಡ್ ಸಿದ್ದರಾಮಯ್ಯನವರಿಗೆ ಎರಡು ಹಗರಣಗಳು ಮುಜುಗರ ಉಂಟು ಮಾಡಿದೆ
ರಾಜ್ಯದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಪಂಚ ಖಾತರಿ ಯೋಜನೆಗಳಿಗೆ ಬಳಕೆ ಮಾಡಿದ್ದು, ಶೋಷಿತ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಕೇಂದ್ರ ಕಾರ್ಯಾಲಯದಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ ಉದ್ಘಾಟಿಸಿದ ಅವರು, ರಾಜ್ಯ ಸರ್ಕಾರ ಪರಿಶಿಷ್ಟರ ಉಪಯೋಜನೆಗಳ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿರುವುದು ಸರಿಯಲ್ಲ. ಮತ್ತೊಂದೆಡೆ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ.
ಬಿಜೆಪಿಯ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಶೋಷಿತ ಸಮುದಾಯಗಳ ಪರವಾಗಿ ಹೋರಾಟ ಮುಂದುವರೆಸಲಿದೆ ಎಂದು ಹೇಳಿದರು.
ಇದನ್ನೂ ಓದಿ : ಡೆಂಘಿ ತುರ್ತು ಪರಿಸ್ಥಿತಿ ಘೋಷಣೆ ಮಾಡೋ ಸ್ಥಿತಿ ನಿರ್ಮಾಣವಾಗಿಲ್ಲ : ದಿನೇಶ್ ಗುಂಡೂರಾವ್
ಮತ್ತೊಂದು ಕಡೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿರುವ ಅನುಮಾನಗಳಿವೆ. ಸಿದ್ದರಾಮಯ್ಯ ಅವರ ಪತ್ನಿಗೆ ನಿವೇಶನ ಹಂಚಿರುವುದರಲ್ಲಿ ನಿಯಮ ಉಲ್ಲಂಘನೆಯಾಗಿದೆ.
ಇದೇ ರೀತಿಯ ಹಲವು ಪ್ರಕರಣಗಳಲ್ಲಿ ಅವ್ಯವಹಾರಗಳ ನಡೆದಿರುವ ಶಂಕೆಯಿದ್ದು, ಹೆಚ್ಚಿನ ತನಿಖೆಗಾಗಿ ಸಿಬಿಐಗೆ ವಹಿಸುವಂತೆ ಆಗ್ರಹಿಸಿದರು.
Discussion about this post