ಅಪನಂಬಿಕೆ ಸರ್ಕಾರದಿಂದ ‘ನಂಬಿಕೆ ನಕ್ಷೆ’ ಯೋಜನೆ ಜಾರಿ : ಆರ್ ಅಶೋಕ
ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗಾಗಿ ನಂಬಿಕೆ ನಕ್ಷೆ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿರುವುದು ಜನರ ಕಣ್ಣೋರೆಸುವ ತಂತ್ರವಾಗಿದೆ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್. ಅಶೋಕ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸರ್ಕಾರ ನಂಬಿಕೆ ಹೆಸರಿನಲ್ಲಿ ಘೋಷಣೆ ಮಾಡುತ್ತಿರುವುದು ಹಾಸ್ಯಾಸ್ಪದ ಮತ್ತು ದುರಂತ ಎಂದು ಹೇಳಿದ್ದಾರೆ.
ಏನಿದು ನಂಬಿಕೆ ನಕ್ಷೆ
ಕಟ್ಟಡ ನಕ್ಷೆ ಮಂಜೂರಾತಿ ವಿಚಾರದಲ್ಲಿ ಬೆಂಗಳೂರು ನಗರದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ನಂಬಿಕೆ ನಕ್ಷೆ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು.
ಜನರೇ ತಮ್ಮ ಕಟ್ಟಡ ನಕ್ಷೆಯನ್ನು ಅನುಮೋದಿತ ಕಟ್ಟಡ ವಿನ್ಯಾಸಕಾರರು ಅಥವಾ ಎಂಜಿನಿಯರ್ಗಳ ಬಳಿ ಅನುಮೋದಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳುವ ಯೋಜನೆ ಇದಾಗಿದೆ. ಗರಿಷ್ಠ 50/80 ವಿಸ್ತೀರ್ಣದವರೆಗಿನ ನಿವೇಶನಗಳಿಗೆ ಈ ಯೋಜನೆ ಅನ್ವಯವಾಗಲಿದೆ
“ಮೊದಲು ಬಿಬಿಎಂಪಿಯ 2 ವಲಯಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಯಶಸ್ವಿಯಾಗಿ ಜಾರಿಯಾದ ಈ ಯೋಜನೆಯ ಸಾಧಕ ಭಾದಕಗಳನ್ನು ಸರಿಪಡಿಸಿ ಪ್ರಸ್ತುತ ಬಿಬಿಎಂಪಿಯ ಎಲ್ಲಾ ವಲಯಗಳಿಗೆ ವಿಸ್ತರಿಸಲಾಗುತ್ತಿದೆ. ಇದರಿಂದ ಜನರು ಪಾಲಿಕೆಗೆ ಅಲೆಯುವುದು ತಪ್ಪುತ್ತದೆ ಅನ್ನೋದು ಡಿಕೆ ಶಿವಕುಮಾರ್ ಮಾತು.