ನಿರ್ದೊಷಿ ಎಂದು ನ್ಯಾಯಾಲಯದಿಂದ ತೀರ್ಪು ಬಂದ ಮೇಲೆ ಅಧಿಕಾರಕ್ಕೆ ಬನ್ನಿ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತೀರ್ಪು ಪ್ರಕಟವಾಗುತ್ತಿದ್ದಂತೆ ಮೈಸೂರಿನಲ್ಲಿ ವಿಧಾನಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ನ್ಯಾಯಾಲಯದಿಂದ ನಿರ್ದೊಷಿ ಎಂದು ತೀರ್ಪು ನೀಡಿದ ಮೇಲೆ ಅಧಿಕಾರಕ್ಕೆ ಬನ್ನಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರು ಪ್ರತಿಭಟನೆ ನಡೆಸಿದರು. ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ, ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ರಾಜ್ಯಪಾಲರ ಕ್ರಮ ಸರಿಯಿಲ್ಲ ಎಂದು ಹೇಳಿದ ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೊಸ್ಕೊ ಪ್ರಕರಣವಿದ್ದು, ಅವರನ್ನು ಬಂಧಿಸುವಂತೆ ಒತ್ತಾಯಿಸಿದರು.