ನನಗೂ 30 ಕೋಟಿ ರೂ. ಹಣ ಮತ್ತು ಸಚಿವ ಸ್ಥಾನ ನೀಡುತ್ತೇನೆ ಎಂದು ಆಮಿಷ ಒಡ್ಡಿದ್ದರು. ಆದರೆ, ನಾನು ಬಿಜೆಪಿಯ ಆಮಿಷಕ್ಕೆ ಬಗ್ಗಲಿಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಮ್ಮಿಶ್ರ ಸರ್ಕಾರದ ಅಸ್ಥಿರಕ್ಕೆ ಬಿಜೆಪಿಯಿಂದ ಯತ್ನ ಮುಂದುವರಿದಿದ್ದು, ನನ್ನನ್ನೂ ಸೇರಿ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಹಣದ ಆಮಿಷ ಒಡ್ಡಿದ್ದಾರೆ ಎಂದು ದೂರಿದ್ದಾರೆ.
ನನಗೆ ಮಂತ್ರಿ ಮಾಡುವುದಾಗಿ ಭರವಸೆ ನೀಡಿದ್ದರು ಎಂದು ತಿಳಿಸಿರುವ ಹೆಬ್ಬಾಳ್ಕರ್, ನನಗೆ ಬಂದ ಮೆಸೇಜ್ ಹಾಗೂ ಫೋನ್ ಕರೆಗಳನ್ನು ಪಕ್ಷದ ಮುಖಂಡರಿಗೆ ತೋರಿಸಿದ್ದೇನೆ. ನಮ್ಮ ಶಾಸಕರು ಗಟ್ಟಿಯಾಗಿದ್ದಾರೆ. ಎಲ್ಲಿಯೂ ಹೊಗುವುದಿಲ್ಲ. ಸರ್ಕಾರ 5 ವರ್ಷ ಸುಭದ್ರವಾಗಿರುತ್ತದೆ ಎಂದು ಹೇಳಿದರು.
ಅಂದ ಹಾಗೇ ಈ ಘಟನೆ ನಡೆದಿರುವುದು ಡಾ. ಜಿ ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದ ವೇಳೆಯಂತೆ. ಅದ್ಯಾಕೆ ಈಗ ಮೇಡಂ ಈ ವಿಚಾರ ಹೇಳಿದ್ರು ಅನ್ನುವುದೇ ಯಕ್ಷ ಪ್ರಶ್ನೆ.
[youtube https://www.youtube.com/watch?v=52WRwfNRlfc&w=523&h=392]
Discussion about this post