ಬೆಂಗಳೂರು : ಈ ತನಕ 43,863 ಕೊರೋನಾ ಸೋಂಕಿತರಿಗೆ ಬಿಬಿಎಂಪಿ ಶಿಫಾರಸಿನ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಒಟ್ಟು 293.23 ಕೋಟಿ ರೂಪಾಯಿ ಹಣವನ್ನು ಖಾಸಗಿ ಆಸ್ಪತ್ರೆಗಳಿಗೆ ಪಾವತಿಸಬೇಕಾಗಿದೆ.
ಈ ಬಗ್ಗೆ ಮಾಹಿತಿ ಕೊಟ್ಟಿರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, 31,624 ರೋಗಿಗಳಿಗೆ ನೀಡಲಾದ ಚಿಕಿತ್ಸಾ ವೆಚ್ಚ 133.20 ಕೋಟಿ ಹಣವನ್ನು ಜನವರಿ 13 ರಂದು ಪಾವತಿಸಲಾಗಿದೆ.ಇನ್ನು 12,239 ಸೋಂಕಿತರಿಗೆ ನೀಡಿದ ಚಿಕಿತ್ಸೆಯ ಮೊತ್ತವನ್ನು ಪಾವತಿಸಬೇಕಾಗಿದೆ.
ಈವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ 67 ಲಕ್ಷ ಮಂದಿಯನ್ನು ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದ್ದು 3,97,836 ಮಂದಿಗೆ ಸೋಂಕು ಕಾಣಿಸಿಕೊಂಡಿತ್ತು. ಈ ಪೈಕಿ 4,012 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
Discussion about this post