ನವದೆಹಲಿ : ದೆಹಲಿ ಬಾರ್ ಅಸೋಸಿಯೆಷನ್ನಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಶವ ಕೋರ್ಟ್ ಆವರಣದಲ್ಲಿರುವ ನ್ಯಾಯಾಧೀಶರ ಕೊಠಡಿಯ ಒಳಗೆ ಪತ್ತೆಯಾಗಿದೆ.ಮೃತ ವ್ಯಕ್ತಿಯನ್ನು 35 ವರ್ಷದ ಮನೋಜ್ ಎಂದು ಗುರುತಿಸಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಕೊಠಡಿಯ ಮೂಲೆಯೊಂದರಲ್ಲಿ ಆತ ರಕ್ತ ವಾಂತಿ ಮಾಡಿಕೊಂಡಿರುವುದು ಗೊತ್ತಾಗಿದೆ. ಜೊತೆಗೆ ಆತ ಮದ್ಯವ್ಯಸನಿಯಾಗಿದ್ದ ಹಾಗೂ ಟಿಬಿ ಕಾಯಿಲೆಯಿಂದ ನರಳುತ್ತಿದ್ದ ಅನ್ನುವುದು ಕೂಡಾ ಗೊತ್ತಾಗಿದೆ.
ಇನ್ನು ಮೈ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ, ಹೀಗಾಗಿ ಶವವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Discussion about this post