ಆರ್ ಆರ್ ನಗರದಲ್ಲಿರುವ ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ ( Bomb threat ) ಬಂದಿದೆ
ಬೆಂಗಳೂರು : ನಗರದ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ. ( Bomb threat ) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆ ( national hill view public school ) ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆರ್ ಆರ್ ನಗರದಲ್ಲಿರುವ ( RR Nagara ) ಈ ಶಾಲೆಗೆ ಬಾಂಬ್ ಇಟ್ಟಿರುವುದಾಗಿ ಇ ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ.
ನಿನ್ನೆ ಸಂಜೆ ವೇಳೆ ಇ ಮೇಲ್ ಬಂದಿದ್ದು, ಇಂದು ಬೆಳಿಗ್ಗೆ ಶಾಲೆಗೆ ಬಂದಾಗ ಈ ವಿಷಯ ಬಹಿರಂಗವಾಗಿದೆ. ತಕ್ಷಣ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರ್ ಆರ್ ನಗರ ಠಾಣೆ ಪೊಲೀಸರು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿದ್ದು,. ಯೂನಿಟ್ 1, ಯೂನಿಟ್ 2ಗೆ ಒಂದೂವರೆ ಸಾವಿರ ಮಕ್ಕಳನ್ನ ಶಿಫ್ಟ್ ಮಾಡಲಾಗಿದೆ.
ಇದನ್ನೂ ಓದಿ : DMK MP Senthilkumar : ನಾವು ನಾಸ್ತಿಕರು : ಭೂಮಿ ಪೂಜೆ ವೇಳೆ ಹಿಂದೂ ಅರ್ಚಕರನ್ನು ಕಂಡು ಡಿಎಂಕೆ ಸಂಸದ ಗರಂ
ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಕೂಡಾ ಪರಿಶೀಲನೆ ನಡೆಸುತ್ತಿದೆ. ಹಿರಿಯ ಪೊಲೀಸರು ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿಯ ಅವಲೋಕನ ನಡೆಸಿತ್ತಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಡಿಕೆಶಿ ಪುತ್ರಿ ಐಶ್ವರ್ಯಾ ಕೂಡಾ ಶಾಲೆಗೆ ಆಗಮಿಸಿದ್ದಾರೆ.
Discussion about this post