ಕೊರೋನಾ ಕಡಿಮೆಯಾಗಿದೆ ಅಷ್ಟೇ ಕೊರೋನಾ ಸತ್ತಿಲ್ಲ… ಎರಡನೇ ಬಾರಿಗೆ ಸೋಂಕಿಗೆ ತುತ್ತಾದ ಬಸವರಾಜ್ ಬೊಮ್ಮಾಯಿ (Bommai corona)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ಸೋಂಕು (Bommai corona) ದೃಢಪಟ್ಟಿದೆ.ಈ ಕಾರಣದಿಂದ ದೆಹಲಿ ಪ್ರವಾಸ ರದ್ದುಗೊಳಿಸಿರುವ ಅವರು ವಿಶ್ರಾಂತಿಗೆ ತೆರಳಿದ್ದಾರೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಎರಡನೇ ಸಲ ಕೊರೋನಾ ಕೊರೋನಾ ಸೋಂಕು ಅಂಟಿಕೊಂಡಿದೆ.
ಬೊಮ್ಮಾಯಿಯವರಿಗೆ (Bommai corona) ಸೋಂಕಿನ ಯಾವುದೇ ಲಕ್ಷಣಗಳು ಇರಲಿಲ್ಲ. ಪ್ರಧಾನಮಂತ್ರಿ ಭೇಟಿಗೆ ತೆರಳುವ ಮುನ್ನ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಹೀಗೆ ಪರೀಕ್ಷೆ ಮಾಡಿಸಿದ ವೇಳೆ ಸೋಂಕು ಪತ್ತೆಯಾಗಿದೆ.
ಇದನ್ನೂ ಓದಿ : Police Ramp Walk : ಕ್ಯಾಟ್ ವಾಕ್ ಮಾಡಿದ 5 ಪೊಲೀಸ್ ಸಿಬ್ಬಂದಿಗೆ ವರ್ಗಾವಣೆ ಶಿಕ್ಷೆ
ಇನ್ನು ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿಗಲು ಕೋವಿಡ್ ಪಾಸಿಟಿವ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಕೊರೋನಾ ದೃಢಪಟ್ಟ ತಕ್ಷಣ ಪ್ರತ್ಯೇಕವಾಗಿದ್ದು ನನ್ನ ಸಂಪರ್ಕಕ್ಕೆ ಬಂದಿರುವವರೆಲ್ಲರೂ ಪರೀಕ್ಷೆ ಮಾಡಿಸಿಕೊಂಡು ಎಚ್ಚರಿಕೆ ವಹಿಸಿ ಎಂದು ಮನವಿ ಮಾಡಿದ್ದಾರೆ.
ಇಂದು ಬೆಳಗ್ಗೆ 11.30ಕ್ಕೆ ಮುಖ್ಯಮಂತ್ರಿ ಬೊಮ್ಮಾಯಿಯವರು ದೆಹಲಿಗೆ ತೆರಳಬೇಕಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಆಜಾದಿ ಕಾ ಅಮೃತ ಮಹೋತ್ಸವ ಮತ್ತು ನೀತಿ ಸಭೆಯಲ್ಲಿ ಅವರು ಪಾಲ್ಗೊಳ್ಳಬೇಕಿತ್ತು. ಆದರೆ ಕೊರೋನಾ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ರದ್ದಾಗಿದೆ.
ಸಭೆಯ ಬಳಿಕ ಕೆಲ ಹಿರಿಯ ಬಿಜೆಪಿ ಮುಖಂಡರನ್ನು ಭೇಟಿಯಾಗುವ ಸಾಧ್ಯತೆಗಳಿತ್ತು. ಹೀಗಾಗಿ ಆಗಸ್ಟ್ 7ರಂದು ದೆಹಲಿಯಿಂದ ಮುಖ್ಯಮಂತ್ರಿಗಳು ಹಿಂದಿರುಗಬೇಕಾಗಿತ್ತು.
Discussion about this post