ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ ಕರ್ನಾಟಕದ ರೈತರ ಪಾಲಿಗೆ ಶಾಪವಾಗಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಕೃಷಿಗೆ ಅಪಾರ ಹಾನಿ ಮಾಡಿದ್ದು, ಅನೇಕ ಕಡೆ ಜಾನುವಾರುಗಳನ್ನು ಕೂಡಾ ರೈತರು ಕಳೆದುಕೊಂಡಿದ್ದಾರೆ.
ಒಂದು ಅಂದಾಜಿನ ಪ್ರಕಾರ ದಾವಣಗೆರೆಯಯಲ್ಲಿ 715ಕ್ಕೂ ಅಧಿಕ ಎಕರೆ ಭತ್ತದ ಬೆಳೆ ನಾಶವಾಗಿದ್ದು, ಚಿತ್ರದುರ್ಗ, ಹೊಸದುರ್ಗ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಭತ್ತದ ಕೃಷಿಗೆ ಹಾನಿಯಾಗಿದೆ. ಇನ್ನು ವಾಣಿಜ್ಯ ಬೆಳೆಗಳಿಗೂ ಈ ಮಳೆ ಸಂಕಷ್ಟ ತಂದೊಡ್ಡಿದ್ದು ಮುಂದಿನ ಸಲ ಫಸಲು ನಿರೀಕ್ಷಿಸಲು ಸಾಧ್ಯವೇ ಇಲ್ಲದಂತಾಗಿದೆ.
ಇನ್ನು ಕಾಫಿ ಬೆಳೆಯುವ ಪ್ರದೇಶಗಳಲ್ಲಿ ಕಾಫಿ ಹಣ್ಣು ಸಂಪೂರ್ಣವಾಗಿ ಉದುರಿ ಹೋಗಿದ್ದು, ಒಣಗಲು ಹಾಕಿದ್ದ ಕಾಫಿ ಬೀಜ ಮಳೆಯ ಪಾಲಾಗಿದೆ. ಮತ್ತೊಂದು ಕಡೆ ಧಾರವಾಡ ಕಡೆ ಮೆಕ್ಕೆಜೋಳ, ಭತ್ತ, ಹತ್ತಿ, ಈರುಳ್ಳಿ ಬೆಳೆ ನಾಶವಾಗಿದೆ. ಹೀಗೆ ರಾಜ್ಯದ ಎಲ್ಲಾ ಭಾಗಗಳಲ್ಲೂ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇಂತಹ ಸಂದರ್ಭದಲ್ಲಿ ತುರ್ತಾಗಿ ಸರ್ಕಾರ ರೈತರ ಸಹಾಯಕ್ಕೆ ಧಾವಿಸಬೇಕಾಗಿದೆ. ಈ ನಡುವೆ ಮಳೆಯಿಂದಾದ ಬೆಳೆ ಹಾನಿ ಬಗ್ಗೆ ಸಮೀಕ್ಷೆ ಕೈಗೊಳ್ಳಲಾಗಿದ್ದು, ರೈತರಿಗೆ ಶೀಘ್ರದಲ್ಲೇ ಪರಿಹಾರ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಮಳೆಯಿಂದಾಗಿ ತರಕಾರಿ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯಗಳಿದ್ದು, ಭತ್ತ ಮೊದಲಾದ ಧಾನ್ಯಗಳನ್ನು ಬೆಂಬಲ ಬೆಲೆಯಡಿ ಖರೀದಿಸುವ ಬಗ್ಗೆ ಚರ್ಚೆಗಳು ನಡೆದಿದೆ. ಆದರೆ ಕರಾವಳಿ ಭಾಗದಲ್ಲಿ ಈಗಾಗಲೇ ಭತ್ತದ ಕಟಾವು ಮುಕ್ತಾಗೊಂಡಿದೆ. ಇನ್ನೂ ಬೆಂಬಲಯ ಬಗ್ಗೆ ಸರ್ಕಾರ ಚರ್ಚೆ ಮಾಡುತ್ತಿದೆ ಅನ್ನುವುದು ವಿಪರ್ಯಾಸ.
Discussion about this post