ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಇಬ್ಬರು ಸೇನಾ ಪೈಲಟ್ಗಳು ಹುತಾತ್ಮರಾಗಿದ್ದಾರೆ.
ಪಟ್ನಿಟಾಪ್ ಪ್ರದೇಶದಲ್ಲಿ ತರಬೇತಿ ಪಡೆಯುತ್ತಿದ್ದಾಗ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಶಿವ್ ಗರ್ ಧರ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ಬೆಳಗ್ಗೆ 10.30 ರಿಂದ 10.45 ರ ನಡುವೆ ಈ ದುರ್ಘಟನೆ ಸಂಭವಿಸಿದ್ದು, ತಕ್ಷಣ ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ತಂಡ ಇಬ್ಬರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ಮೇಜರ್ ರೋಹಿತ್ ಕುಮಾರ್ ಹಾಗೂ ಮೇಜರ್ ಅನುಜ್ ರಜಪೂತ್ ಎಂದು ಗುರುತಿಸಲಾಗಿದೆ.
Both the pilot and co-pilot on board have died in hospital after their army helicopter was forced to crash land at Shiv Garh Dhar in Udhampur district of Jammu and Kashmir, media reports say citing military officials
Discussion about this post