ಮಂಗಳೂರು : ನಗರದ ಹೃದಯ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಸಂಗ್ರಹಿಸಿ ಇಡಲಾಗಿದ್ದ ಸ್ಫೋಟಕಗಳನ್ನು ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಬಂದರು ಠಾಣಾ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು ದೊಡ್ಡ ಮೊತ್ತದ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.
ಪರವಾನಿಗೆ ಇಲ್ಲದೆ ಸ್ಫೋಟಕಗಳನ್ನು ಇರಿಸಲಾಗಿದೆ ಅನ್ನುವ ಖಚಿತ ಮಾಹಿತಿಯ ಮೇರೆಗೆ ಈ ದಾಳಿ ನಡೆದಿದ್ದು, 1725 ಕೆಜಿ ಸ್ಫೋಟಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರ ಮೊತ್ತ 1 ಲಕ್ಷ 11 ಸಾವಿರ ಎಂದು ಅಂದಾಜಿಸಲಾಗಿದೆ.
ಈ ಸಂಬಂಧ ಆನಂದ್ ಗಟ್ಟಿ ಯಾನೆ ಆನಂದ ಗಟ್ಟಿ ಅನ್ನುವವರನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಸ್ಫೋಟಕ ದಾಸ್ತಾನಿಟ್ಟಿದ್ದ ಗಾಂಧಿ ಸನ್ಸ್ ಕಟ್ಟಡದಲ್ಲಿ ಬೇರೆ ಅಂಗಡಿಗಳು ಕೂಡಾ ಕಾರ್ಯಾಚರಿಸುತ್ತಿದೆ ಒಂದು ವೇಳೆ ಅನಾಹುತ ಸಂಭವಿಸುತ್ತಿದ್ರೆ ಇಡೀ ಮಂಗಳೂರು ನಗರ ತತ್ತರಗೊಳ್ಳಬೇಕಾಗಿತ್ತು.
Discussion about this post