ಶತಾಯಗತಾಯ ವಿಧಾನಸಭೆ ಉಪ ಚುನಾವಣೆಯಲ್ಲಿ ಹೆಚ್ಚು ಸ್ಛಾನಗಳನ್ನು ಗೆಲ್ಲಬೇಕು ಎಂದು ಪಣತೊಟ್ಟಿರುವ ಕಾಂಗ್ರೆಸ್ ಅದಕ್ಕಾಗಿ ರಣತಂತ್ರ ರೂಪಿಸುತ್ತಿದೆ.
ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಹೋದರೆ ಕಾಂಗ್ರೆಸ್ ಮುಳುಗೋದು ಗ್ಯಾರಂಟಿ ಎಂದು ಖಚಿತವಾದ ಹಿನ್ನಲೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಲು ನಿರ್ಧರಿಸಲಾಗಿದೆ.
ಹೀಗಾಗಿ ಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲಿ 12ರಲ್ಲಿ ಗೆಲ್ಲುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ.
12 ಸ್ಥಾನಗಳನ್ನು ಗೆಲ್ಲಬೇಕಾದರೆ ತನು ಮನ ಧನ ಸಾಕಷ್ಟು ಮುಖ್ಯವಾಗಿದೆ. ಡಿಕೆ ಶಿವಕುಮಾರ್ ಬೆಂಬಲವೂ ಉಪಚುನಾವಣೆಗಿಲ್ಲ ಹೀಗಾಗಿ ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಲಾಗಿದೆ.
ಹೀಗಾಗಿ ಗೆಲುವಿನ ಗುರಿ ಮುಟ್ಟುವ ಅಭ್ಯರ್ಥಿಗೆ ಆದ್ಯತೆ ನೀಡಲಾಗಿದ್ದು, ಪಕ್ಷ ಸಂಘಟನೆ, ಪಕ್ಷ ನಿಷ್ಟೆಗಳನ್ನು ಪಕ್ಕಕೆ ಸರಿಸಲಾಗಿದೆ.
ಸುಪ್ರಿಂ ಕೋರ್ಟ್ ತೀರ್ಪು ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದು, ಸಂಭಾವ್ಯರ ಪಟ್ಟಿ ಸಿದ್ಧಪಡಿಸಲಾಗುತ್ತಿದೆ.
ಈ ನಡುವೆ ಕೆ.ಆರ್.ಪುರಂ, ಯಶವಂತಪುರ, ಹೊಸಕೋಟೆ ಸೇರಿದಂತೆ ಕೆಲ ಕ್ಷೇತ್ರಗಳಲ್ಲಿ ಪ್ರಬಲ ಸ್ಪರ್ಧೆ ನೀಡುವ ಅಭ್ಯರ್ಥಿಗಳ ಕೊರತೆ ಕಾಂಗ್ರೆಸ್ ನಾಯಕರಿಗೆ ಕಾಡುತ್ತಿದೆ. ಹೀಗಾಗಿ ಬಿಜೆಪಿ ಮತ್ತು ಜೆಡಿಎಸ್ ಕಡೆಯಿಂದ ಸೂಕ್ತ ಅಭ್ಯರ್ಥಿಯನ್ನು ಸೆಳೆಯುವ ಸಾಧ್ಯತೆ ಇದೆ.

Discussion about this post