ಶಾಸಕರ ರಾಜೀನಾಮೆ ಮತ್ತು ಅನರ್ಹತೆ ನಂತರದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಜೊತೆಗಿನ ಮೈತ್ರಿ ಕಡಿದುಕೊಳ್ಳುವ ಸೂಚನೆ ಕೊಟ್ಟಿದೆ. ಒಂದು ವೇಳೆ ಮೈತ್ರಿ ಅಂತ್ಯಗೊಂಡರೆ ವಿಧಾನಸಭಾ ಉಪ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಸ್ಥರೇ ಕೆಲವು ಕ್ಷೇತ್ರಗಳಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿದೆ.
ಲಭ್ಯ ಮಾಹಿತಿಗಳ ಪ್ರಕಾರ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ನಿಖಿಲ್ ಕುಮಾರಸ್ವಾಮಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ಅಥವಾ ರಾಜರಾಜೇಶ್ವರಿ ನಗರದಿಂದ ಕಣಕ್ಕಿಳಿಯುವ ಸಾಧ್ಯತೆಗಳಿದೆ.
ಪ್ರಸ್ತುತ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಮೈಸೂರು ಜಿಲ್ಲೆಯ ಹುಣಸೂರು ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆಗಳಿದೆ. ಈ ವೇಳೆ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದರೆ, ತೆರವಾಗುವ ಹಾಸನ ಲೋಕಸಬಾ ಕ್ಷೇತ್ರದ ಉಪ ಚುನಾವಣೆಯಲ್ಲಿ ದೇವೇಗೌಡರೇ ಕಣಕ್ಕಿಳಿಯುವ ಸಾಧ್ಯತೆಗಳಿದೆ.
ಈ ನಡುವೆ ನಿಖಿಲ್ ಜೊತೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸಹೋದರಿ ಶೈಲಜಾ ಅವರ ಹೆಸರು ಕೂಡಾ ಕೆ.ಆರ್ ಪೇಟೆ ಕ್ಷೇತ್ರಕ್ಕೆ ಕೇಳಿ ಬಂದಿದೆ.
ಈ ನಡುವೆ ಇಂದು ಸಂಜೆ 4 ಗಂಟೆಗೆ ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಲಿದ್ದು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಿದ್ದಾರೆ.
Discussion about this post