ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಆತಂಕದ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಠಿಣ ಕ್ರಮಗಳನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ನಡುವೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳಿಗೆ ಬಿಜೆಪಿಯಲ್ಲೇ ಅಪಸ್ವರ ಕೇಳಿ ಬಂದಿದೆ. ಸಚಿವ ಈಶ್ವರಪ್ಪ ಸೇರಿದಂತೆ ಅನೇಕರು ಕ್ಯಾತೆ ತೆಗೆದಿದ್ದಾರೆ. ಕರಾವಳಿ ಭಾಗದ ಬಿಜೆಪಿ ಜನಪ್ರತಿನಿಧಿಗಳನ್ನು ಹೊರತುಪಡಿಸಿದ್ರೆ ಬಹುತೇಕರು ರಾಜ್ಯ ಸರ್ಕಾರದ ಕ್ರಮಗಳ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.
ಈ ನಡುವೆ ಇಂದು ಸಂಪುಟ ಸಭೆ ಕರೆಯಲಾಗಿದ್ದು, ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿದೆ. ಇನ್ನುಳಿದಂತೆ ಕೊರೋನಾ ಆತಂಕದ ನಡುವೆಯೂ ಕಾಂಗ್ರೆಸ್ ಜನವರಿ 9 ರಂದು ಹಮ್ಮಿಕೊಂಡಿರುವ ಪಾದಯಾತ್ರೆಯ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಯೋ ಸಾಧ್ಯತೆಯಿದ್ದು, ಪಾದಯಾತ್ರೆ ನಡೆಸಿದ್ರೆ ಸರ್ಕಾರದ ಕ್ರಮ ಏನಾಗಿರಬೇಕು ಎಂಬ ಬಗ್ಗೆ ಚರ್ಚೆ ನಡೆಯೋ ಸಾಧ್ಯತೆ ಇದೆ.
Discussion about this post