ಈಗಾಗಲೇ ಕೇಂದ್ರ ಸರ್ಕಾರದ ಆದೇಶದ ಅನ್ವಯ ಬಿಎಸ್6 ವಾಹನಗಳನ್ನು ಬಿಡುಗಡೆ ಮಾಡಬೇಕಾದ ಒತ್ತಡಕ್ಕೆ ಸಿಲುಕಿರುವ ವಾಹನ ಉತ್ಪಾದಕ ಸಂಸ್ಥೆಗಳು ಮತ್ತೊಂದು ಕಡೆ ಎಲೆಕ್ಟ್ರಿಕ್ ವಾಹನಗಳ ಬಗ್ಗೆಯೂ ಗಮನ ಹರಿಸಬೇಕಾಗಿದೆ.
ಭಾರತದ ಮಾರುಕಟ್ಟೆಯಲ್ಲಿ ಮುಂದಿನ ಕೆಲವೇ ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಮಾರಾಟವಾಗಬೇಕು ಮತ್ತು ರಸ್ತೆಗಳಲ್ಲಿ ಬಹುತೇಕವಾಗಿ ಎಲೆಕ್ಟ್ರಿಕ್ ವಾಹನಗಳು ಸಂಚರಿಸಬೇಕು ಎಂದು ಕೇಂದ್ರ ಸರ್ಕಾರ ಆದೇಶಿಸಿದೆ. ಹೀಗಾಗಿ ವಾಹನ ತಯಾರಕ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳ ತಯಾರಿ ಕಾರ್ಯದಲ್ಲಿದೆ.
ಈಗಾಗಲೇ ಮಹೀಂದ್ರಾ, ಟಾಟಾ ಮೋಟಾರ್ಸ್ ಹಾಗೂ ಮಾರುತಿ ಸುಜುಕಿ ಸೇರಿ ಹಲವಾರು ವಾಹನ ತಯಾರಕ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳನ್ನು ಮುಂದಿನ ವರ್ಷ ಬಿಡುಗಡೆಗೊಳಿಸುವ ಯೋಜನೆಯಲಿದೆ.
ಇದೀಗ ಅದೇ ಪಟ್ಟಿಗೆ ನಿಸ್ಸಾನ್ ಸಂಸ್ಥೆಯು ಸೇರಿಕೊಂಡಿದೆ. ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ತಮ್ಮ ಲೀಫ್ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.
ಈಗಿನ ಲಭ್ಯ ಮಾಹಿತಿ ಪ್ರಕಾರ ಲೀಫ್ ಕಾರನ್ನು ಒಂದು ಬಾರಿ ಚಾರ್ಜ್ ಮಾಡಿದರೆ ಬರೋಬ್ಬರಿ 400 ಕಿ.ಮೀ ಮೈಲೇಜ್ ನೀಡಲಿದೆ.
ಇನ್ನು ನಿಸ್ಸಾನ್ ಲೀಫ್ ಎಲೆಕ್ಟ್ರಿಕ್ ಕಾರುಗಳಲ್ಲಿ 40kWh ಬ್ಯಾಟರಿ ಬಳಕೆ ಮಾಡಲಾಗಿದ್ದು, ಪೂರ್ಣ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜ್ ಮಾಡಲು 8 ಗಂಟೆ ತಗುಲುತ್ತದೆಯಂತೆ.
ಹೊಸ ಎಲೆಕ್ಟಿಕ್ ಕಾರಿನ ಬೆಲೆ ರೂ.30 ಲಕ್ಷದಿಂದ ರೂ.35 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.
Discussion about this post