ನವದೆಹಲಿ : ಮೀಸಲಾತಿ ಕುರಿತಂತೆ ದೇಶದಲ್ಲಿ ಅಸಮಾಧಾನದ ಮಾತುಗಳು ಪದೇ ಪದೇ ಕೇಳಿ ಬರುತ್ತಿದೆ. ಜಾತಿ ಆಧಾರದಲ್ಲಿ ಮೀಸಲಾತಿ ನೀಡುವ ಬದಲು ಆದಾಯ, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಬರಲಿ ಅನ್ನುವುದು ಹಲವರ ವಾದ. ಆದರೆ ಹಿಂದುಳಿದ ಜಾತಿ ಜನಾಂಗಗಳಿಗೆ ಮೀಸಲಾತಿ ಯಾಕೆ ಬೇಕು ಅನ್ನುವುದಕ್ಕೆ ತನ್ನದೇ ಆದ ಕಾರಣಗಳಿದೆ.
ಈ ನಡುವೆ ಕೇಂದ್ರ ಸರ್ಕಾರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದು. ಉನ್ನತ ಶಿಕ್ಷಣದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಸರಕಾರ ಮುಂದಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ ಹೊರ ಬಿದ್ದಿದ್ದು, ವೈದ್ಯಕೀಯ ಕಾಲೇಜುಗಳ ಪ್ರವೇಶದಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇ.27 ರಷ್ಟು ಮೀಸಲಾತಿಯನ್ನು ಘೋಷಿಸಲಾಗಿದೆ.
ಸರ್ಕಾರದ ನಿರ್ಧಾರದ ಪ್ರಕಾರ, ಈಗ ಇತರ ಹಿಂದುಳಿದ ವರ್ಗಗಳ (OBC) ಶೇ.27 ರಷ್ಟು ವಿದ್ಯಾರ್ಥಿಗಳು ಎಂಬಿಬಿಎಸ್ ಮತ್ತು ಬಿಡಿಎಸ್ ಪದವಿ ಕೋರ್ಸ್ಗಳು, ಸ್ನಾತಕೋತ್ತರ ಕೋರ್ಸ್ಗಳು ಮತ್ತು ಡಿಪ್ಲೊಮಾ ವೈದ್ಯಕೀಯ ಕೋರ್ಸ್ಗಳಲ್ಲಿ ಮತ್ತು ಆರ್ಥಿಕವಾಗಿ ದುರ್ಬಲ ಸಾಮಾನ್ಯ ವರ್ಗದ (EWS) ವಿದ್ಯಾರ್ಥಿಗಳಿಗೆ ಶೇ.10 ರಷ್ಟು ಮೀಸಲಾತಿ ಪಡೆಯಲಿದ್ದಾರೆ.
ಈ ಮಹತ್ವದ ಘೋಷಣೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, “ನಮ್ಮ ಸರ್ಕಾರವು ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ / ದಂತ ಶಿಕ್ಷಣಕ್ಕಾಗಿ ಅಖಿಲ ಭಾರತ ಕೋಟಾ ಯೋಜನೆಯಲ್ಲಿ ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ 10% ಮೀಸಲಾತಿ ಹಾಗೂ ಒಬಿಸಿಗಳಿಗೆ 27% ಮೀಸಲಾತಿಯನ್ನು ನೀಡುವ ನಿರ್ಧಾರ ತೆಗೆದುಕೊಂಡಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಿಂದ ನಮ್ಮ ಸಾವಿರಾರು ಯುವಕರಿಗೆ ಉತ್ತಮ ಅವಕಾಶಗಳನ್ನು ಪಡೆಯಲು ಇದು ಸಹಕಾರಿಯಾಗಲಿದೆ ಹಾಗೂ ದೇಶದ ಸಾಮಾಜಿಕ ನ್ಯಾಯದ ಹೊಸ ಮಾದರಿಗೆ ನಾಂದಿ ಅಂದಿದ್ದಾರೆ.
Discussion about this post