pfi banned ಇತ್ತೀಚೆಗಷ್ಟೇ ಪಿಎಫ್‌ಐ ಕಚೇರಿಗಳು ಹಾಗೂ ಮುಖಂಡರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಐಎನ್‌ಎ) ದಾಳಿ ನಡೆಸಿತ್ತು
ನವದೆಹಲಿ : ಉಗ್ರಗಾಮಿ ಚಟುವಟಿಕೆಗಳಿಗೆ ನೆರವು ನೀಡುತ್ತಿರುವ ಆರೋಪದಲ್ಲಿ ಕೇಂದ್ರೀಯ ಏಜೆನ್ಸಿಗಳು ದೇಶಾದ್ಯಂತ PFIಕಚೇರಿಗಳ ಮೇಲೆ ದಾಳಿ ನಡೆಸಿ ಹಲವು ಮಂದಿ ಮುಖಂಡರನ್ನು ಬಂಧಿಸಿದ ಬೆನ್ನಲ್ಲೇ, ಮುಂದಿನ ಐದು ವರ್ಷಗಳ ಅವಧಿಗೆ ಭಾರತದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯನ್ನು ( pfi banned )ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ.
ಜೊತೆಗೆ PFI ಜೊತೆ ನಂಟು ಹೊಂದಿರುವ ಎಂಟು ಸಹ ಸಂಸ್ಥೆಗಳಿಗೂ ನಿಷೇಧ ಹೇರಲಾಗಿದೆ. ತನಿಖಾ ಏಜೆನ್ಸಿಗಳ ವರದಿ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.
ಸ್ಟೂಡೆಂಟ್ ಇಸ್ಲಾಮಿಕ್ ಮೂವ್‍ಮೆಂಟ್ ಆಫ್ ಇಂಡಿಯಾ (ಸಿಮಿ), ಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ್ (ಜೆಎಂಬಿ) ಮತ್ತು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆಯಂಡ್ ಸಿರಿಯಾ (ಐಎಸ್‍ಐಎಸ್) ಸಂಘಟನೆಗಳ ಜತೆ ನಂಟು ಹೊಂದಿರುವ ಕಾರಣಕ್ಕೆ ಪಿಎಫ್‍ಐ ನಿಷೇಧಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಅಂಗಸಂಸ್ಥೆಗಳಾದ ರೆಹಾಬ್ ಇಂಡಿಯಾ ಫೌಂಡೇಶನ್ (Rehab India Foundation), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಷನ್ (NCHRO), ನ್ಯಾಷನಲ್ ವಿಮೆನ್ಸ್ ಫ್ರಂಟ್ (NWF), ಜೂನಿಯರ್ ಫ್ರಂಟ್ (JF), ಎಂಪವರ್ ಇಂಡಿಯಾ ಫೌಂಡೇಶನ್ (EIF) ಮತ್ತು ರಿಹಾಬ್ ಫೌಂಡೇಶನ್, ಕೇರಳ (EFRF) ನಿಷೇಧಿಸಲಾಗಿದೆ
Discussion about this post