ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ : ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾಸ್ಟ್ರಕ್ಚರ್ ಮಿಷನ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.
ಬಿಡುಗಡೆಯಾದ ಅನುದಾನದ ಪೈಕಿ ೨೪ ಕೋಟಿ ರೂಪಾಯಿ ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.
ಇನ್ನುಳಿದ ಹಲವು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.
The Union government has released ₹25.11 crore under the Pradhan Mantri Ayushman Bharat Health Infrastructure Mission (PM-ABHIM) for building a new critical care block and setting up an integrated public health laboratory (IPHL) on the premises of Government Wenlock Hospital in Mangaluru, according to Capt. Brijesh Chowta, Dakshina Kannada MP.