ರಾಜಕೀಯ ಮಾಡಲು ಬಂದಿಲ್ಲ. ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಬಂದಿದ್ದೇನೆ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಚನ್ನಪಟ್ಟಣದ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ ೨೫ ಫಲಾನುಭವಿಗಳಿಗೆ ಸಾರಥಿ ಯೋಜನೆಯಲ್ಲಿ ಸಹಾಯಧನ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ೨ ಸಾವಿರದ ೬೯ ಅರ್ಜಿದಾರರಿಗೆ ನಿವೇಶನ, ೨ ಸಾವಿರದ ೩೦೦ ವಸತಿ ವಿತರಣೆ ಹಾಗೂ ೨೦೦ ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಇದೇ ವೇಳೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ರಾಜಕೀಯ ಮಾಡಲು ಬಂದಿಲ್ಲ. ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.