ಈ ಯೋಜನೆಯಿಂದ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಒಂದು ಲಕ್ಷ ಉದ್ಯೋಗ ಸೃಷ್ಟಿ
ರಾಜ್ಯ ಸರಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾದ ಕೆಎಚ್ಐಆರ್ (ನಾಲೆಡ್ಜ್-ಹೆಲ್ತ್-ಇನ್ನೋವೇಶನ್-ರೀಸರ್ಚ್) ಸಿಟಿಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ೨೬ರಂದು ಚಾಲನೆ ನೀಡಲಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಿದ್ದು, ಇದರಲ್ಲಿ ದೇಶ-ವಿದೇಶಗಳ ಗಣ್ಯ ಉದ್ಯಮಿಗಳು, ಶಿಕ್ಷಣ ತಜ್ಞರು, ಸಂಶೋಧಕರು ಮತ್ತು ವೈದ್ಯಕೀಯ ಕ್ಷೇತ್ರದ ಸಾಧಕರು ಭಾಗವಹಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.
ಒಟ್ಟು ೨,೦೦೦ ಎಕರೆ ವಿಸ್ತೀರ್ಣದಲ್ಲಿ ಈ ಯೋಜಿತ ನಗರ ಮೈದಾಳಲಿದೆ. ಈ ಪೈಕಿ ಮೊದಲ ಹಂತದಲ್ಲಿ ೫೦೦ ಎಕರೆಯಲ್ಲಿ ಕೆಎಚ್ಐಆರ್ ಸಿಟಿ ಸಾಕಾರಗೊಳ್ಳಲಿದೆ.
೪೦ ಸಾವಿರ ಕೋಟಿ ರೂ. ಹೂಡಿಕೆಯ ಈ ಯೋಜನೆಯಿಂದ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ’ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಈಗಾಗಲೇ ಅಭಿವೃದ್ಧಿಪಡಿಸಿರುವ ಹೈಟೆಕ್ ಸಿಟಿ, ಎಲೆಕ್ಟ್ರಾನಿಕ್ ಸಿಟಿಯ ಮಾನದಂಡಗಳನ್ನೂ ಇಟ್ಟುಕೊಳ್ಳಲಾಗಿದೆ.
ದೊಡ್ಡಬಳ್ಳಾಪುರ- ಡಾಬಸಪೇಟೆ ನಡುವೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ೫೦ ಕಿ.ಮೀ. ದೂರದಲ್ಲಿ ಇದು ಅಸ್ತಿತ್ವಕ್ಕೆ ಬರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
The Karnataka government’s Knowledge Health Innovation Research-City (KHIR-City) project, considered to be the first-of-its-kind in the country, will be inaugurated by Chief Minister Siddaramaiah on September 26, 2024. The works for the first phase of the project will be launched at Vidhana Soudha.