Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಿಧಾನಪರಿಷತ್ ಫಲಿತಾಂಶ ಚುನಾವಣೆ : ಚಿಕ್ಕಮಗಳೂರಿನಲ್ಲಿ 6 ಮತಗಳಿಂದ ಸೋತ ಕಾಂಗ್ರೆಸ್

ಗೆದ್ದೇ ಗೆಲ್ತೀವಿ ಅಂದುಕೊಂಡಿದ್ದ ಕ್ಷೇತ್ರದಲ್ಲಿ ಸೋಲಾಗಿರುವುದು ಕಾಂಗ್ರೆಸ್ ನಾಯಕರ ನೆಮ್ಮದಿ ಕೆಡಿಸಿದೆ. ಸೋಲುವ ಛಾನ್ಸೇ ಇಲ್ಲ ಅಂದುಕೊಂಡಿದ್ದ ಕ್ಷೇತ್ರದ ಸೋಲನ್ನು ಇದೀಗ ನ್ಯಾಯಾಲಯದಲ್ಲಿ ಪ್ರಶ್ನಿಸಲು ಕಾಂಗ್ರೆಸ್ ಮುಂದಾಗಿದೆ.

Radhakrishna Anegundi by Radhakrishna Anegundi
14-12-21, 3 : 02 pm
in ರಾಜ್ಯ
karnataka-mlc-election
Share on FacebookShare on TwitterWhatsAppTelegram

ಚಿಕ್ಕಮಗಳೂರಿನಲ್ಲಿ ಗೆಲ್ಲೋದು ಗ್ಯಾರಂಟಿ ಅನ್ನುವುದು ಕಾಂಗ್ರೆಸ್ ನಾಯಕರ ಲೆಕ್ಕಚಾರವಾಗಿತ್ತು. ಆದರೆ ಕೊನೆಯ ಕ್ಷಣದ ಬಿಜೆಪಿಯ ಕಸರತ್ತು ಎಲ್ಲಾ ಲೆಕ್ಕಾಚಾರವನ್ನು ಉಲ್ಟಾ ಮಾಡಿದೆ. ಹೀಗಾಗಿ ಕಾಂಗ್ರೆಸ್ ಕೋರ್ಟ್ ಮೆಟ್ಟಿಲೇರಲು ಸಿದ್ದತೆ ಮಾಡಿಕೊಂಡಿದೆ.

ಚಿಕ್ಕಮಗಳೂರು : ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೇವಲ 6 ಮತಗಳ ಅಂತರದಿಂದ ಕಾಂಗ್ರೆಸ್ ಸೋಲು ಕಂಡಿದೆ. 6 ಮತಗಳ ಮುನ್ನೆಯ ಮೂಲಕ ಬಿಜೆಪಿ ಅಭ್ಯರ್ಥಿ ಎಂ. ಕೆ. ಪ್ರಾಣೇಶ್ ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಸೋಲಿನ ರುಚಿ ಕಂಡಿದ್ದಾರೆ. ಗಾಯತ್ರಿ ಇಲ್ಲಿ 1,182 ಮತಗಳನ್ನು ಪಡೆದಿದ್ದು, ನ್ಯಾಯಾಲಯದ ಮೂಲಕ ಗೆಲುವಿನ ಕುದುರೆ ಏರಲು ಕಾಂಗ್ರೆಸ್ ಮುಂದಾಗಿದೆ.

ಚಿಕ್ಕಮಗಳೂರಿನಲ್ಲಿ 9 ಮಂದಿ ನಾಮನಿರ್ದೇಶನಗೊಂಡ ಸದಸ್ಯರು ಮತದಾನ ಮಾಡಿದ್ದಾರೆ. ಈಗಾಗಲೇ ಈ ವಿಚಾರದಲ್ಲಿ ಕಾಂಗ್ರೆಸ್ ನ್ಯಾಯಾಲಯದ ಮೆಟ್ಟಿಲು ಹತ್ತಿದೆ. ಹಾಗಿರುವಾಗ ಫಲಿತಾಂಶ ಪ್ರಕಟಿಸಿರುವುದು ಸರಿಯಲ್ಲ ಅಂದಿರುವ ಕಾಂಗ್ರೆಸ್ ನಾಯಕರು, 9 ಮಂದಿಯ ಮತಗಳನ್ನು ಅಸಿಂಧುಗೊಳಿಸಲು ಮತ್ತೊಮ್ಮೆ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ.

ಒಂದು ವೇಳೆ 9 ಮಂದಿ ನಾಮನಿರ್ದೇಶನಗೊಂಡ ಸದಸ್ಯರು ಮತದಾನ ಮಾಡದಿರುತ್ತಿದ್ರೆ ಗೆಲುವು ನಮ್ಮದೇ ಅನ್ನುವುದು ಕಾಂಗ್ರೆಸ್ ನಾಯಕರ ನಿಲುವು.

ಹಾಸನಕ್ಕೆ ಸೀಮಿತವಾದ ಜೆಡಿಎಸ್ : ಕಾರ್ಯಕರ್ತರನ್ನು ಗೆಲ್ಲಿಸುವಲ್ಲಿ ಸೋತ ದಳಪತಿಗಳು

ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತದ ಕನಸು ಕಾಣುತ್ತಿರುವ ಜೆಡಿಎಸ್ ಎರಡಂಕಿಯ ಸ್ಥಾನಗಳನ್ನು ಪಡೆಯಲು ಪರದಾಡಲಿದೆ ಅನ್ನುವ ಮುನ್ಸೂಚನೆಯನ್ನು ಪ್ರಕಟವಾಗಿರುವ ವಿಧಾನಪರಿಷತ್ ಫಲಿತಾಂಶ ನೀಡಿದೆ. ಹಾಸನದಲ್ಲಿ ಕುಟುಂಬದ ಕುಡಿ ಸೂರಜ್ ಗೌಡ ಗೆಲುವು ಕಂಡಿದ್ದು ಬಿಟ್ರೆ ಮತ್ತೆಲ್ಲಾ ಕಡೆಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿದೆ.

ಅಲ್ಲಿಗೆ ಜೆಡಿಎಸ್ ನಲ್ಲಿ ಕುಟುಂಬ ಸದಸ್ಯರಿಗೆ ಮಾತ್ರ ಗೆಲ್ಲುವ ತಾಕತ್ತಿದ್ದು, ಕಾರ್ಯಕರ್ತರನ್ನು ಗೆಲ್ಲಿಸಿಕೊಂಡು ಬರೋ ತಾಕತ್ತು ದಳಪತಿಗಳಿಗೆ ಇಲ್ಲ ಎಂದು ಸಾಬೀತಾಗಿದೆ. ಸ್ಥಳೀಯ ಸಂಸ್ಥೆಗಳ ಸದಸ್ಯರ ಮನ ಗೆಲ್ಲುವಲ್ಲಿ ಜೆಡಿಎಸ್ ನಾಯಕರು ವಿಫಲವಾಗಿರುವುದೇ ಈ ಸೋಲಿಗೆ ಕಾರಣ ಅನ್ನುವುದು ಸ್ಪಷ್ಟ. ಜೊತೆಗೆ ಚುನಾವಣೆ ಸಂದರ್ಭದಲ್ಲಿ ಕುಮಾರಸ್ವಾಮಿ ಕೊಟ್ಟ ಹೇಳಿಕೆ ಕೂಡಾ ಸೋಲಿಗೆ ಕಾರಣ ಎನ್ನಲಾಗಿದೆ. ಪಕ್ಷ ಬಿಟ್ಟು ಹೋಗುವವರು ಹೋಗಲಿ ಅನ್ನುವ ಕುಮಾರಸ್ವಾಮಿ ಹೇಳಿಕೆ ಜೆಡಿಎಸ್ ಅಭ್ಯರ್ಥಿಗಳ ಸೋಲಿಗೆ ಮುನ್ನುಡಿ ಬರೆದಿದೆ.

ಈ ಸೋಲಿನಿಂದ ಪ್ರಾದೇಶಿಕ ಪಕ್ಷವಾಗಿ ಬೆಳೆಯಲು ಜೆಡಿಎಸ್ ಗೆ ಇದ್ದ ಕೊನೆಯ ಅವಕಾಶವೂ ಕೈ ತಪ್ಪಿದ್ದು, ಜೆಡಿಎಸ್ ನ ಭದ್ರಕೋಟೆ ಎಂದು ಕರೆಸಿಕೊಂಡ ಮಂಡ್ಯದ ಸೋಲು ಇದಕ್ಕೆ ಸಾಕ್ಷಿಯಾಗಿದೆ.

ಇನ್ನು ಈ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ

2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ.

ಚುನಾವಣೆ ಎಂದರೆ ಸೋಲು-ಗೆಲುವು. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಈಗ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್‌ ಎಂದೂ ಧೃತಿಗೆಡುವುದಿಲ್ಲ.

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಚುನಾವಣೆಯ ಮತದಾರರು. ಜನರೇ ನೇರವಾಗಿ ಹಕ್ಕು ಚಲಾಯಿಸುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಪುಟಿದೆದ್ದು ಬರಲಿದೆ. ಜನರಲ್ಲಿ ಜೆಡಿಎಸ್‌ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು ಈ ಚುನಾವಣೆಯಲ್ಲಿ ಜಯ ಗಳಿಸಿದ ಎಲ್ಲ ಪಕ್ಷಗಳ ಅಭ್ಯರ್ಥಿಗಳಿಗೆ ನನ್ನ  ಶುಭಾಶಯಗಳು ಅಂದಿದ್ದಾರೆ.

Tags: FEATUREDkarnataka-mlc-election
Share1TweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

yakshagana ರಂಗದ ಸಾಧಕಿಗೆ Karnataka Rajyotsava ಪ್ರಶಸ್ತಿ

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Bigg Boss ಮನೆಗೆ ವರ್ತೂರು ಸಂತೋಷ್ : ಕಿಚ್ಚ ಕೊಟ್ಟೆ ಬಿಟ್ರು ಸುಳಿವು – varthur santhosh

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್