ಮಂಗಳೂರು : ಹಡಗಿನಲ್ಲಿ ಕೆಲಸ ಮಾಡುತ್ತಿದ್ದ ಚೀನಾ ದೇಶದ ನಾವಿಕನೊಬ್ಬ ನಾಪತ್ತೆಯಾಗಿದ್ದು, ಈ ಸಂಬಂಧ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು ಸುರತ್ಕಲ್ ನ 70 ನಾಟಿಕಲ್ ಮೈಲು ದೂರದ ಅರಬ್ಬಿ ಸಮುದ್ರದಲ್ಲಿ ನಾವಿಕ ನಾಪತ್ತೆಯಾಗಿದ್ದು, ನಾಪತ್ತೆಯಾದವನನ್ನು ಚೀನಾದ ಕ್ಷು ಜುನ್ ಫಂಗ್ ( 52) ಎಂದು ಗುರುತಿಸಲಾಗಿದೆ.
ಈ ಸಂಬಂಧ ಇಂಡಿಯನ್ ಕೋಸ್ಟ್ ಗಾರ್ಡ್ ಡೆಪ್ಯೂಟಿ ಕಮಾಂಡೆಂಟ್ ಭುವನೇಶ್ ಕುಮಾರ್ ಮೇ 28 ರಂದು ಫ್ಯಾಕ್ಸ್ ಮೂಲಕ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ ಕ್ಷು ಜುನ್ ಫಂಗ್ ಮೇ 10 ರಂದು ಅರಬ್ಬಿ ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ ಅನ್ನಲಾಗಿದೆ.
Discussion about this post