ಸೆಪ್ಟೆಂಬರ್ 19 ರಿಂದ 22 ರವರೆಗೆ ರಾಷ್ಟ್ರದ ಅತಿದೊಡ್ಡ ಆಹಾರ ಮೇಳ
ಬರುವ ಸೆಪ್ಟೆಂಬರ್ 19 ರಿಂದ 22 ರವರೆಗೆ ಜಾಗತಿಕ ಮತ್ತು ಭಾರತೀಯ ಆಹಾರ ವಲಯದ ಪಾಲುದಾರರ ಸಹಯೋಗದೊಂದಿಗೆ ರಾಷ್ಟ್ರದ ಅತಿದೊಡ್ಡ ಆಹಾರ ಮೇಳವಾಗಿರುವ ವರ್ಲ್ಡ್ ಫುಡ್ ಇಂಡಿಯಾ ಆಯೋಜಿಸಲಾಗುತ್ತಿದೆ. ಇದರ ಅಂಗವಾಗಿ ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೇಳದ ಮಾಹಿತಿ ನೀಡುವ ವೆಬ್ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಅನ್ನು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್ ಪಾಸ್ವಾನ್ ಬಿಡುಗಡೆ ಮಾಡಿದರು.
ಬಳಿಕ ಅವರು, ಕೃಷಿ ಕ್ಷೇತ್ರದಲ್ಲಿ ಮೌಲ್ಯವರ್ಧನೆಯನ್ನು ಉತ್ತೇಜಿಸುವ ಹಾಗೂ ಆಹಾರ ಭದ್ರತೆಯನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಆಹಾರ ಸಂಸ್ಕರಣಾ ವಲಯ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸುವ ಮೂಲಕ ಆಹಾರ ಉತ್ಪಾದನಾ ಕ್ಷೇತ್ರಕ್ಕೆ ಹೆಚ್ಚು ಉತ್ತೇಜನ ನೀಡುತ್ತಿದೆ. ಆತ್ಮ ನಿರ್ಭರ ಮತ್ತು ವಿಕಸಿತ ಭಾರತದ ಗುರಿಯತ್ತ ಕೆಲಸ ಮಾಡುತ್ತಿದೆ ಎಂದರು.
ಕಳೆದ ವರ್ಷ ನಡೆದ ಮೇಳದಲ್ಲಿ 90 ದೇಶಗಳಿಂದ 715 ಅಂತರರಾಷ್ಟ್ರೀಯ ಖರೀದಿದಾರರು, 24 ರಾಜ್ಯಗಳು ಮತ್ತು 75 ಸಾವಿರಕ್ಕೂ ಅಧಿಕ ಜನರು ಭಾಗಿಯಗಿದ್ದರು. ಈ ವರ್ಷ ಇನ್ನೂ ಹೆಚ್ಚಿನ ಜನರ ನಿರೀಕ್ಷೆ ಇದೆ. ಆಹಾರ ವಲಯವನ್ನು ಇನ್ನಷ್ಟು ಸದೃಢಗೊಳಿಸುವ ಮೂಲಕ ವಿವಿಧ ಅವಕಾಶಗಳ ಬಾಗಿಲನ್ನು ತೆರೆಯಲಾಗುವುದು ಎಂದರು.
Discussion about this post