T20 ಕ್ರಿಕೆಟ್ನಲ್ಲಿ ಕ್ರಿಸ್ ಗೇಲ್ ಮತ್ತೊಂದು ದಾಖಲೆ ಬರೆದಿದ್ದಾರೆ. ಇದೀಗ 14 ಸಾವಿರ ರನ್ಗಳನ್ನು ಗಳಿಸಿದ ವಿಶ್ವದ ಮೊತ್ತ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್ನಲ್ಲಿರುವ ಡರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೂರನೇ ಹಣಾಹಣಿಯಲ್ಲಿ 14 ಸಾವಿರ ರನ್ ಗಳ ಸರದಾರ ಅನ್ನುವ ಬಿರುದು ಗಳಿಸಿದ್ದಾರೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಆಸ್ಟ್ರೇಲಿಯಾ 20 ಓವರ್ಗಳಲ್ಲಿ 6 ವಿಕೆಟ್ಗೆ 141 ರನ್ ಗಳಿಸಿತ್ತು. ಆ ನಂತರ ಈ ಗುರಿಯನ್ನು ಬೆನ್ನು ಹತ್ತಿದ ವೆಸ್ಟ್ ಇಂಡೀಸ್ ನ ಒಪನರ್ ಗಳನ್ನು ಪೆವೆಲಿಯನ್ ಗೆ ಅಟ್ಟುವಲ್ಲಿ ಆಸ್ಟ್ರೇಲಿಯಾ ಬೌಲರ್ ಗಳು ಯಶಸ್ವಿಯಾಗಿದ್ದರು.
ಆದರೆ 3ನೇ ಕ್ರಮಾಂಕದಲ್ಲಿ ಮೈದಾನಕ್ಕಿಳಿದ ಕ್ರಿಸ್ ಗೇಲ್ 38 ಎಸೆತಗಳಲ್ಲಿ 4 ಫೋರ್ ಹಾಗೂ 7 ಸಿಕ್ಸರ್ಗಳ ಮೂಲಕ 67 ರನ್ ಸಂಪಾದಿಸಿ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ. ಕೇವಲ 14.5 ಓವರ್ಗಳಲ್ಲಿ 6 ವಿಕೆಟ್ಗಳ ಜಯ ದಕ್ಕಿಸಿಕೊಂಡ ಗೇಲ್ ಗ್ಯಾಂಗ್ 5 ಪಂದ್ಯಗಳ ಸರಣಿಯಲ್ಲಿ ಇನ್ನು 2 ಪಂದ್ಯ ಬಾಕಿ ಇರುವಾಗಲೇ 3-0 ಅಂತರದಲ್ಲಿ ಗೆದ್ದುಕೊಂಡಿದೆ.
Discussion about this post