ಬೆಂಗಳೂರು : ಕೊರೋನಾ ಸೋಂಕಿನ ಅಬ್ಬರ ತಗ್ಗಿರುವ ಹಿನ್ನಲೆಯಲ್ಲಿ ನಾಳೆಯಿಂದ 6 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಪ್ರಾರಂಭವಾಗಲಿದೆ. ಸರ್ಕಾರದ ಆದೇಶದಂತೆ ಈಗಾಗಲೇ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳ ಸ್ವಾಗತಕ್ಕೆ ಶಾಲೆಗಳು ಸಜ್ಜಾಗಿದೆ.
ಈ ಹಿಂದೆ ಮೊದಲ ಹಂತದಲ್ಲಿ ಆಗಸ್ಟ್ 23 ರಿಂದ 9 ರಿಂದ 12 ತರಗತಿ ತನಕದ ತರಗತಿಗಳನ್ನು ಪ್ರಾರಂಭಿಸಲಾಗಿದ್ದು, ಎರಡನೇ ಹಂತದಲ್ಲಿ 6 ರಿಂದ 8 ನೇ ತರಗತಿಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಶೇ2 ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ಶಾಲೆಗಳು ಪ್ರಾರಂಭಗೊಳ್ಳಲಿದ್ದು, ದಕ್ಷಿಣ ಕನ್ನಡ ಸೇರಿ ಕೇರಳದೊಂದಿಗೆ ಗಡಿ ಹಂಚಿರುವ ತಾಲೂಕುಗಳಲ್ಲಿ ಶಾಲೆಗಳು ಪ್ರಾರಂಭವಾಗುವುದಿಲ್ಲ.
ಇನ್ನೂ ಮಾರ್ಗಸೂಚಿ ಅನುಸಾರ ಶಾಲಾ ಆವರಣವನ್ನು ಸ್ವಚ್ಛಗೊಳಿಸಬೇಕಾಗಿದ್ದು, ಪ್ರತಿ ಕೊಠಡಿ, ಪ್ರಯೋಗಾಲಯ ಎಲ್ಲವನ್ನೂ ಸ್ವಚ್ಚಗೊಳಿಸಿ ಸ್ಯಾನಿಟೈಸ್ ಮಾಡಬೇಕಾಗಿದೆ.ಈ ನಡುವೆ ಮಕ್ಕಳ ಸುರಕ್ಷತೆ ಸಲುವಾಗಿ ತಾವು ಕೈಗೊಂಡಿರುವ ಕ್ರಮಗಳ ಬಗ್ಗೆ ವಿಡಿಯೋ ಮಾಹಿತಿಯನ್ನು ಪೋಷಕರಿಗೆ ಕೆಲ ಶಾಲಾ ಶಿಕ್ಷಕರು, ಆಡಳಿತ ಮಂಡಳಿ ಕಳುಹಿಸಿಕೊಟ್ಟಿದೆ. ಈ ಮೂಲಕ ಯಾವೊಬ್ಬ ವಿದ್ಯಾರ್ಥಿಯೂ ಶಾಲೆ ತಪ್ಪಿಸಿಕೊಳ್ಳದಂತೆ ಎಚ್ಚರಿಕೆ ವಹಿಸಲಾಗುತ್ತಿದೆ.
Discussion about this post