ಯಲ್ಲಾಪುರ : ಮಳೆಯಿಂದ ಹಾನಿಗೆ ಒಳಗಾಗಿರುವ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಿವಿಧ ಪ್ರದೇಶಗಳಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನ ಬಾರೇಕಳಚೆ – ಕೈಗಾ ರಸ್ತೆ, ಕುಸಿದ ಸೇತುವೆ ಮೊದಲಾದ ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಪ್ರದೇಶಗಳನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಯಲ್ಲಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಕೊರೋನಾ ಲಸಿಕೆ ವಿತರಣಾ ಕೇಂದ್ರದ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್, ಶಾಸಕರಾದ ಸುನಿಲ್ ನಾಯ್ಕ್ ಉಪಸ್ಥಿತರಿದ್ದರು.
Discussion about this post