ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಪುತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗಳು ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪ್ರವಾಸದಲ್ಲಿದ್ದ ಬೊಮ್ಮಾಯಿ ಎಲ್ಲಾ ನಿಗದಿತ ಕಾರ್ಯಕ್ರಮ ರದ್ದುಗೊಳಿಸಿ ಬೆಂಗಳೂರಿಗೆ ದೌಡಾಯಿಸಿದ್ದಾರೆ.
ಎರಡು ದಿನಗಳ ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ ಬೊಮ್ಮಾಯಿ, ಇಂದು ಹುಬ್ಬಳ್ಳಿಯಲ್ಲಿದ್ದರು. ಮಗಳು ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಗೊತ್ತಾದ ತಕ್ಷಣ ಹುಬ್ಬಳ್ಳಿಯಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿ, ಅಪೋಲೋ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದಾರೆ. ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ ಅವರು ಇದೀಗ ಗೃಹ ಕಚೇರಿಗೆ ಕೃಷ್ಣಾಗೆ ಭೇಟಿ ಕೊಟ್ಟಿದ್ದಾರೆ.
ಸಿಎಂ ಪುತ್ರಿಯ ಆರೋಗ್ಯದ ಬಗ್ಗೆ ಮತ್ತಷ್ಟು ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.
Discussion about this post