ದಸರಾ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಬಾರದು : ಸಿದ್ದರಾಮಯ್ಯ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು. ಕಾನೂನು ಸುವ್ಯಸ್ಥೆಯಿಂದ ಆರ್ಥಿಕ ಪ್ರಗತಿ ಸಾಧ್ಯ. ಇದರ ಕಡೆ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಎಂದರು.
೫೬ ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಜನರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಇದು ಅರ್ಹರಿಗೆ ತಲುಪಬೇಕು ಎಂದರು.
ದಸರಾ ಜನರ ಉತ್ಸವ. ದಸರಾ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಬಾರದು ಎಂದರು. ಇದಕ್ಕು ಮುನ್ನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡಾ ಪ್ರಕರಣದಲ್ಲಿ ಕಾನೂನು ಹೋರಾಟ ಮುಂದುವರೆಯಲಿದೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಪಪಡಿಸಿದರು.