ಕೆಲ ದಿನಗಳ ಹಿಂದಷ್ಟೇ ರಾಹುಲ್ ಗಾಂಧಿಯವರ ಟ್ವಿಟರ್ ಖಾತೆಯನ್ನು ಲಾಕ್ ಮಾಡಿದ್ದ ಟ್ವಿಟರ್ ಸಂಸ್ಥೆ. ಇಂದು ಕಾಂಗ್ರೆಸ್ ಪಕ್ಷದ ಟ್ವಿಟರ್ ಖಾತೆಯನ್ನೇ ತಾತ್ಕಾಲಿಕವಾಗಿ ನಿಷೇಧಿಸಿದೆ. ಇಂದು ಕಾಂಗ್ರೆಸ್ ಹಿರಿಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದು, ಕೈ ಕಾರ್ಯಕರ್ತರು ಟ್ವಿಟರ್ ಸಂಸ್ಥೆಯ ವಿರುದ್ಧ ಮುಗಿ ಬಿದ್ದಿದ್ದಾರೆ.
ಇದನ್ನೂ ಓದಿ : ರಾಹುಲ್ ಗಾಂಧಿಯ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಪಕ್ಷದ ಟ್ವಿಟರ್ ಖಾತೆಗೆ ಕಂಟಕ
ಈ ನಡುವೆ ಬುಧವಾರ ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೇವಾಲಾ ಸೇರಿ ಐವರು ಹಿರಿಯ ಕೈ ನಾಯಕರ ಟ್ವಿಟರ್ ಖಾತೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ. AICC ಪ್ರಧಾನ ಕಾರ್ಯದರ್ಶಿ ಅಜಯ್ ಮೇಕನ್, ಲೋಕಸಭೆಯ ಕಾಂಗ್ರೆಸ್ ಸಚೇತಕ ಮಾಣಿಕ್ಯಂ ಠಾಗೋರ್, ಕಾಂಗ್ರೆಸ್ ನ ಅಸ್ಸಾಂ ಉಸ್ತುವಾರಿ ಮತ್ತು ಮಾಜಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಷ್ಮಿತಾ ದೇವ್ ಅವರ ಟ್ವಿಟರ್ ಖಾತೆಗಳನ್ನು ತಡೆ ಹಿಡಿಯಲಾಗಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಐಸಿಸಿ ಸಂವಹನ ವಿಭಾಗದ ಉಸ್ತುವಾರಿ ಪ್ರಣವ್, ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದಿರುವ ಟ್ವಿಟರ್ ಸಂಸ್ಥೆ ಹೀಗೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
Discussion about this post