ಬೆಳಗಾವಿ : ವಿಧಾನಪರಿಷತ್ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಗೆಲುವಿಗಾಗಿ ಜಿದ್ದಾಜಿದ್ದಿ ಸಮರ ನಡೆಸಿದೆ. ಆದರೆ ಕುಂದಾನಗರಿ ಬೆಳಗಾವಿಯಲ್ಲಿ ಮಾತ್ರ ಸಾಹುಕಾರ ಖ್ಯಾತಿಯ ರಮೇಶ್ ಜಾರಕಿಹೊಳಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮುಂದೆ ಮಂಡಿಯೂರಿದ್ದಾರೆ.
ಹೆಬ್ಬಾಳ್ಕರ್ ಸಹೋದರ ಚೆನ್ನರಾಜುವನ್ನು ಸೋಲಿಸಲೇಬೇಕು ಎಂದು ಪಣ ತೊಟ್ಟಿದ್ದ ರಮೇಶ್ ಜಾರಕಿಹೊಳಿ ಹೋರಾಟದಲ್ಲಿ ಸೋತಿದ್ದಾರೆ. ಮೊದಲ ಪ್ರಾಶಸ್ತ್ಯದ ಮತ ಎಣಿಕೆಯಲ್ಲೇ ಕಾಂಗ್ರೆಸ್ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ. ಎರಡನೇ ಸ್ಥಾನವನ್ನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲಖನ್ ಜಾರಕಿಹೊಳಿ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಸೋಲಿಗೂ ರಮೇಶ್ ಜಾರಕಿಹೊಳಿ ಕಾರಣರಾಗಿದ್ದಾರೆ.
ಈ ಹಿಂದೆ PLD ಬ್ಯಾಂಕ್ ಚುನಾವಣೆ ಸಂದರ್ಭದಲ್ಲೂ ರಮೇಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಕಡೆಯಿಂದ ಮುಖ ಭಂಗವಾಗಿತ್ತು.
Discussion about this post