ಕಾಂಗ್ರೆಸ್ ಶಾಸಕರು ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಸಿಕ್ಕಾಪಟ್ಟೆ ಕಿರುಕುಳ ಕೊಟ್ಟಿದ್ದಾರೆ. ಕಾಂಗ್ರೆಸ್ ಶಾಸಕರ ಅತಿರೇಕದ ವರ್ತನೆಗಳು ಕುಮಾರಸ್ವಾಮಿಗೆ ಬೇಸರ ತರಿಸಿತ್ತು ಎಂದು ಜೆಡಿಎಸ್ ವಿಧಾನಪರಿಷತ್ ಸದಸ್ಯ ಶರವಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನಾಯಕರು ನೀಡುತ್ತಿರುವ ಕಿರುಕುಳ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್ ವರಿಷ್ಠ ದೇವೇಗೌಡರ ಮುಂದೆ ಕಣ್ಣೀರು ಕೂಡಾ ಹಾಕಿದ್ದರು ಅಂದಿದ್ದಾರೆ.
ದೇವೇಗೌಡರ ಮುಂದೆ ಕುಮಾರಸ್ವಾಮಿ ಕಣ್ಣೀರು ಹಾಕಿದ್ಯಾಕೆ....? 1
ಕಾಂಗ್ರೆಸ್ ಶಾಸಕರು ಕೊಟ್ಟ ಹಿಂಸೆಗಳು ಏನು ಅನ್ನುವುದಕ್ಕೆ ನಾನೇ ಸಾಕ್ಷಿ ಅಂದಿರುವ ಶರವಣ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಕುಮಾರಸ್ವಾಮಿ ದೇವೇಗೌಡರ ಬಳಿ ಹೇಳಿಕೊಂಡಿದ್ದರು. ಆದರೆ ನಾವೇ ಬಲವಂತ ಮಾಡಿ ಆತುರದ ತೀರ್ಮಾನ ಬೇಡ ಅಂದೆವು.
ದೇವೇಗೌಡರ ಮುಂದೆ ಕುಮಾರಸ್ವಾಮಿ ಕಣ್ಣೀರು ಹಾಕಿದ್ಯಾಕೆ....? 2
ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರಿಗೆ ಕುಮಾರಸ್ವಾಮಿ ಸಿಎಂ ಸ್ಥಾನದಲ್ಲಿರುವುದು ಬೇಕಿರಲಿಲ್ಲ. ಕುಮಾರಸ್ವಾಮಿ ಅವರನ್ನು ಇಳಿಸಲೇಬೇಕು ಎಂದು ಅವರು ತೀರ್ಮಾನಿಸಿದ್ದರು. ಈಗ ಆ ಕೆಲಸ ಮಾಡಿಯಾಗಿದೆ. ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ ಕಾರಣ ಅನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯ ಎಂದು ನೇರ ಆರೋಪ ಮಾಡುವುದನ್ನು ಶರವಣ ಈ ವೇಳೆ ಮರೆಯಲಿಲ್ಲ.
Discussion about this post