ಬೆಂಗಳೂರು : ಕರ್ನಾಟಕದಲ್ಲಿ ಕೊರೋನಾಗೆ ಮತ್ತೊಂದು ಬಲಿಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೋನಾ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಈ ಸಾವು ಸಂಭವಿಸಿದ್ದು, ಇದೀಗ ಬೆಂಗಳೂರಿನಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿದಂತಾಗಿದೆ. ಮೃತರನ್ನು ಹೆಣ್ಣೂರು ಬಾಣಸವಾಡಿಯ 57 ವರ್ಷದ ಮಹಿಳೆ ಎಂದು ಗುರುತಿಸಲಾಗಿದೆ.
ಇನ್ನು ಈ ಪ್ರಕರಣದಲ್ಲಿ HBR lay out ನಲ್ಲಿರುವ ಖಾಸಗಿ ಆಸ್ಪತ್ರೆ ಎಡವಟ್ಟು ಮಾಡಿಕೊಂಡಿದೆ ಅನ್ನುವ ಮಾಹಿತಿ ಲಭ್ಯವಾಗಿದೆ.
ಉಸಿರಾಟದ ಸಮಸ್ಯೆ ಸೇರಿದಂತೆ ಕೊರೋನಾ ಸೋಂಕಿನ ಲಕ್ಷಣಗಳಿದ್ದರೂ ಮಹಿಳೆ ಮತ್ತು ಆಕೆಯ ಕುಟುಂಬಸ್ಥರು ಆ ವಿಚಾರವನ್ನು ಮುಚ್ಚಿಟ್ಟಿದ್ಜರು ಎನ್ನಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಬಳಿಕ ಸ್ಯಾಂಪಲ್ ಕಳುಹಿಸಲಾಗಿತ್ತು, ಯಾವಾಗ ಲ್ಯಾಬ್ ರಿಪೋರ್ಟ್ ಕೊರೋನಾ ಪಾಸಿಟಿವ್ ಎಂದು ಬಂತೋ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು ಸೂಕ್ತ ಕ್ರಮಗಳನ್ನು ಕೈಗೊಂಡಿದೆ.
ಮೇ 7 ರಂದು ಮಹಿಳೆ ಸಾವನ್ನಪ್ಪಿದ್ದರು ಅನ್ನೋ ಮಾಹಿತಿ ಇದೀಗ ಲಭ್ಯವಾಗಿದೆ. ಇದೀಗ ಖಾಸಗಿ ಆಸ್ಪತ್ರೆಗೆ ಬೀಗ ಜಡಿಯಲಾಗಿದೆ. 15 ದಿನಗಳ ಆಸ್ಪತ್ರೆ ಬಾಗಿಲು ಹಾಕೋದು ಅನಿವಾರ್ಯ.
ಇನ್ನು ಆಸ್ಪತ್ರೆಯ ರೋಗಿಗಳನ್ನು ಬೇರೆ ಕಡೆ ಸ್ಥಳಾಂತರಿಸಲಾಗಿದೆ. ಜೊತೆಗೆ ಆಸ್ಪತ್ರೆ ವೈದ್ಯರು ಮತ್ತು ನರ್ಸ್ ಹಾಗೂ ಇತರ ಸಿಬ್ಬಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
Discussion about this post