ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ದೇಶಾದ್ಯಂತ ಹಮ್ಮಿಕೊಂಡಿರುವ ಬೃಹತ್ ಕೋವಿಡ್ ಲಸಿಕಾ ಅಭಿಯಾನ ಬಹುತೇಕ ಯಶಸ್ವಿಯಾಗಿದೆ. ಮಧ್ಯಾಹ್ನದ ವೇಳೆಗೆ ಬರೋಬ್ಬರಿ 1 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ. ಇದರಲ್ಲಿ ಮೊದಲ ಹಾಗೂ ಎರಡನೇ ಡೋಸ್ ಕೂಡಾ ಸೇರಿದೆ.
ಇನ್ನು ರಾತ್ರಿ 8 ಗಂಟೆಯ ತನಕ ಲಸಿಕಾ ಕಾರ್ಯಕ್ರಮ ನಡೆಯಲಿದ್ದು ದೇಶದಲ್ಲಿ ಹೊಸ ದಾಖಲೆಯನ್ನು ನಿರೀಕ್ಷಿಸಲಾಗುತ್ತಿದೆ. 2 ಕೋಟಿ ಡೋಸ್ ಲಸಿಕೆ ನೀಡಬಹುದು ಅನ್ನುವುದು ಈಗಿನ ಅಂದಾಜು.
ಈಗಾಗಲೇ ಭಾರತದಲ್ಲಿ ನಡೆದಿರುವ ಕೊರೋನಾ ಲಸಿಕಾ ಕಾರ್ಯಕ್ರಮವನ್ನು ವಿಶ್ವ ಆರೋಗ್ಯ ಸಂಸ್ಥೆಯೇ ಹೊಗಳಿದ್ದು, ಇದೊಂದು ಅದ್ಭುತ ಸಾಧನೆ ಎಂದು ಬಣ್ಣಿಸಿದೆ. ಈ ನಡುವೆ ಕರ್ನಾಟಕದಲ್ಲಿ 30 ಲಕ್ಷ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಇಂದಿನ ಲಸಿಕಾ ಬೃಹತ್ ಲಸಿಕಾ ಅಭಿಯಾನದ ಮೂಲಕ 5 ಕೋಟಿ ಡೋಸ್ ಲಸಿಕೆಯನ್ನು ನೀಡಿದೆ.
Discussion about this post