ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಇದೀಗ ಭಾರತದ ನೆರೆ ರಾಷ್ಟ್ರ ನೇಪಾಳದಲ್ಲಿಯೂ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂಡೋ-ನೇಪಾಳ ಗಡಿಯಲ್ಲಿ ಕೆಟ್ಟೆಚ್ಚರ ವಹಿಸಲಾಗಿದೆ.
ವ್ಯಕ್ತಿಯೊಬ್ಬರು ಕೆಲ ದಿನಗಳ ಹಿಂದೆ ಚೀನಾಗೆ ಭೇಟಿ ನೀಡಿದ್ದು, ಇದೀಗ ನೇಪಾಳಕ್ಕೆ ವಾಪಾಸ್ಸಾಗಿದ್ದಾರೆ. ಇದೀಗ ಈ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಇರುವುದು ಪತ್ತೆಯಾಗಿದೆ. ಈ ಬಗ್ಗೆ ನೇಪಾಳದ ಆರೋಗ್ಯ ಮತ್ತು ಜನಸಂಖ್ಯೆ ನಿರ್ವಹಣೆ ಇಲಾಖೆ ಖಚಿತ ಮಾಹಿತಿ ನೀಡಿದೆ.
ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ಭಾರತ-ನೇಪಾಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಗಡಿಯಲ್ಲಿ ಭದ್ರತೆ ಹೆಚ್ಚಿಸುವ ಕುರಿತಂತೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮತ್ತು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಮಾತುಕತೆ ನಡೆಸಿದ್ದಾರೆ.
Discussion about this post