ಬೆಂಗಳೂರು : ಎರಡನೆ ಅಲೆ ಅಂತ್ಯವಾಗುತ್ತಿರುವ ಹಿನ್ನಲೆಯಲ್ಲಿ ಉನ್ನತ ಶಿಕ್ಷಣ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಉನ್ನತ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.
ಈ ಹಿನ್ನಲೆಯಲ್ಲಿ ಇನ್ನು 10 ದಿನಗಳ ಒಳಗಾಗಿ 18 ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೂ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸುವ ಸಂಬಂಧ ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಇನ್ನು ಹತ್ತು ದಿನದಲ್ಲಿ ಎಂಜಿನಿಯರಿಂಗ್, ಮೆಡಿಕಲ್, ಪ್ಯಾರಾ ಮೆಡಿಕಲ್, ಡಿಪ್ಲೊಮೋ, ಜಿಸಿಐಟಿ, ಐಟಿಐ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.
Discussion about this post