ಐಸಿಸಿ ವಿಶ್ವಕಪ್ 2019 ರ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭಾರತ 36 ರನ್ ಗಳ ಭರ್ಜರಿ ಜಯ ದಾಖಲಿಸಿದೆ.
ಕೆನ್ನಿಂಗ್ ಟನ್ ಓವಲ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತ್ತು.
ಭಾರತ ನೀಡಿದ ಬೃಹತ್ ಮೊತ್ತದ ಬೆನ್ನಟ್ಟಿದ ಆಸ್ಟ್ರೇಲಿಯಾ 63 ರನ್ ಗಳಿಸುತ್ತಿದ್ದಂತೆಯೇ ಆರಂಭಿಕ ಅಘಾತ ಎದುರಿಸಿತ್ತು. ಭಾರತೀಯ ಬೌಲರ್ ಗಳ ಎದುರಿಸಲು ವಿಫಲರಾದ ಆಸ್ಟ್ರೇಲಿಯಾ ತಂಡದ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪರೇಡ್ ನಡೆಸಿದರು.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 352 ರನ್ ಕಳ ಬೃಹತ್ ಮೊತ್ತ ಕಲೆ ಹಾಕಿತು. ಭಾರತ ಪರ ಶಿಖರ್ ಧವನ್ ಶತಕ ಬಾರಿಸಿದರೆ ನಾಯಕ ವಿರಾಟ್ ಕೊಹ್ಲಿ ಬಿರುಸಿನ 82 ರನ್ ಗಳಿಸಿದರು.
ನಂತರ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ 50 ಓವರ್ ಗಳಲ್ಲಿ 316 ರನ್ ಗಳಿಗೆ ಆಲೌಟಾಯಿತು. ಈ ಗೆಲುವಿನೊಂದಿಗೆ ಭಾರತ ತಂಡ ಆಸ್ಟ್ರೇಲಿಯಾದ ಸತತ 10 ಗೆಲುವುಗಳ ಅಜೇಯ ಓಟಕ್ಕೆ ಬ್ರೇಕ್ ಹಾಕಿತು. ಈ ಪಂದ್ಯಕ್ಕೂ ಮೊದಲು ಆಸ್ಟ್ರೇಲಿಯಾ ಸತತ 10 ಪಂದ್ಯಗಳನ್ನು ಗೆದ್ದಿತ್ತು. ಶತಕವೀರ ಶಿಖರ್ ಧವನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
Discussion about this post