ಬೆಳಗಾವಿ : ಅನ್ಯ ಸಮುದಾಯದ ಯುವತಿಯನ್ನು ಪ್ರೀತಿಸಿ ಮದುವೆಯಾಗಲು ಮುಂದಾದ ಯುವಕನನ್ನು ಕೊಲೆ ಮಾಡಿರೋ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಸೆ. 28ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮೃತನನ್ನು ಖಾನಾಪುರ ಪಟ್ಟಣದ ಅರ್ಬಾಜ್ ಮುಲ್ಲಾ (24) ಎಂದು ಗುರುತಿಸಲಾಗಿದೆ. ಯುವತಿಯ ಕುಟುಂಬಸ್ಥರ ತೀವ್ರ ವಿರೋಧದ ನಡುವೆಯೂ ಅರ್ಬಾಜ್ ಯುವತಿಯನ್ನು ಪ್ರೀತಿಸಿದ್ದ. ಯುವತಿಯ ಕುಟುಂಬಸ್ಥರು ನೀಡಿದ್ದ ಎಚ್ಚರಿಕೆಯನ್ನೂ ಕಡೆಗಣಿಸಿದ್ದ. ಮಾತ್ರವಲ್ಲದೆ ಆಕೆಯನ್ನು ಮದುವೆಯಾಗಲು ಮುಂದಾಗಿದ್ದ.
ಈ ವಿಷಯ ತಿಳಿದ ದುಷ್ಕರ್ಮಿಗಳು ಸೆ.28ರಂದು ಮಧ್ಯರಾತ್ರಿ ದುಷ್ಕರ್ಮಿಗಳು ಅರ್ಬಾಜ್ನನ್ನು ಕೊಲೆ ಮಾಡಿದ್ದಾರೆ. ಬಳಿಕ ಶವವನ್ನು ಖಾನಾಪುರ ಹೊರವಲಯದ ರೈಲ್ವೆ ಹಳಿ ಮೇಲೆ ಬಿಸಾಡಿ ಪರಾರಿಯಾಗಿದ್ದಾರೆ.
ಈ ಸಂಬಂಧ ಬೆಳಗಾವಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ಖಾನಾಪುರ ಠಾಣೆಗೆ ವರ್ಗಾಯಿಸಲಾಗಿದೆ.
Discussion about this post